ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ
ಕಾಪು : ಇಲ್ಲಿನ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಕಾಪು ಜೇಸೀಸ್ ನ ಸಹಕಾರದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು.
ಶಾಲಾ ಮಕ್ಕಳಿಗೆ ಗಿಡ ವಿತರಿಸಿ ಮಾತನಾಡಿದ ಕಾಪು ಜೇಸೀಸ್ ನ ಅಧ್ಯಕ್ಷರಾದ ಸುಖಾಲಾಕ್ಷಿ ಬಂಗೇರ, ಬದಲಾಗುತ್ತಿರುವ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಾದ ತಾವು ಪರಿಸರದ ಬಗ್ಗೆ, ಕಾಳಜಿ ವಹಿಸಬೇಕು. ಪ್ರತಿಯೊಬ್ಬರೂ ತಮ್ಮ ಮನೆ, ಶಾಲೆಗಳಲ್ಲಿ ಗಿಡ ನೆಟ್ಟು ಅದನ್ನು ಪೋಷಿಸಬೇಕು ಹಾಗೂ ಸುಂದರ ಪರಿಸರವನ್ನು ನಿರ್ಮಿಸಿ ಅರೋಗ್ಯವಂತ ಸಮಾಜವನ್ನು ರೂಪಿಸಬೇಕು ಎಂಬ ಸಂದೇಶವನ್ನು ನೀಡಿದರು.
ಆಡಳಿತಾಧಿಕಾರಿಗಳಾದ ಆಲ್ಬನ್ ರೋಡ್ರಿಗಸ್ ರವರು ಧಾರ್ಮಿಕ ನಂಬಿಕೆಯೊಂದಿಗೆ ನಾವು ಪರಿಸರವನ್ನು ರಕ್ಷಿಸುತ್ತಿದ್ದೇವೆ. ಪ್ರತಿಯೊಬ್ಬರು ಕೂಡಾ ಇದರ ಮಹತ್ವವನ್ನು ಅರಿತು ಸುಂದರ ವಾತಾವರಣವನ್ನು ನಿರ್ಮಿಸಬೇಕೆಂಬ ಕಿವಿ ಮಾತನ್ನು ಹೇಳಿದರು.
ಸಮಾರಂಭದಲ್ಲಿ ಎನ್.ಸಿ.ಸಿ, ಎನ್.ಎಸ್.ಎಸ್. ಸ್ಕೌಟ್ಸ್, ಕಬ್-ಬುಲ್ ವಿದ್ಯಾರ್ಥಿಗಳು, ಹಾಗೂ ವಿವಿಧ ಘಟಕಗಳ ನಿರ್ದೇಶಕರುಗಳಾದ ತೇಜಶ್ರೀ, ವೀಣಾ ನಾಯಕ್, ಉದಯಕುಮಾರ್, ಕನ್ನಡ ಮಾಧ್ಯಮ ವಿಭಾಗದ ಮುಖ್ಯಸ್ಥೆ ಕೃಪಾ, ಜೇಸಿಯ ಪೂರ್ವಾಧ್ಯಕ್ಷ ರಮೇಶ್ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.
ಪ್ರಾಂಶುಪಾಲ ನೀಲಾನಂದ್ ನಾಯ್ಕ ಸ್ವಾಗತಿಸಿದರು. ಕಾರ್ಯಕ್ರಮವನ್ನು ಶಿಕ್ಷಣ ಸಂಯೋಜಕ ಶಿವಣ್ಣ ಬಾಯಾರ್ ನಿರೂಪಿಸಿದರು. ಪ್ರಾಥಮಿಕ ಶಾಲಾ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಸ್ಥ ಗೇಬ್ರಿಯಲ್ ಮಸ್ಕರೇನಸ್ ವಂದಿಸಿದರು.
