ಕಾಪು : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ - ಕಾಪು ವಲಯದ ಕುಟುಂಬ ಸಮ್ಮಿಲನ ಕಾರ್ಯಕ್ರಮ
ಕಾಪು : ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ಕಾಪು ವಲಯದ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮವು K1 ಹೋಟೆಲ್ ಕಾಪು ಇಲ್ಲಿ ಜರಗಿತು.
ಕಾರ್ಯಕ್ರಮವನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮಪ್ರಸಾದ್ ಜೈನ್ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು ವೃತ್ತಿಯ ಒತ್ತಡದ ನಡುವೆ ಕುಟುಂಬ ಸಮ್ಮಿಲನದಂತಹ ಕಾರ್ಯಕ್ರಮಗಳು ಸದಸ್ಯರಿಗೆ ಅನಿವಾರ್ಯ. ಬಾಂಧವ್ಯವನ್ನು ಉಳಿಸಿ ಬೆಳೆಸಲು ಸಹಕಾರಿಯಾಗಿದೆ ಎಂದರು.
ವೇದಿಕೆಯಲ್ಲಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ರಮೇಶ್ ಕಲಶ್ರೀ, ಕಾಪು ವಲಯದ ಅಧ್ಯಕ್ಷರಾದ ಸಚಿನ್ ಉಚ್ಚಿಲ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್, ಕಾಪು ವಲಯದ ಉಪಾಧ್ಯಕ್ಷರುಗಳಾದ ಸಂತೋಷ್ ಕಾಪು, ಸತೀಶ್ ಎರ್ಮಾಳು, ವಲಯದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಭಟ್, ಕೋಶಾಧಿಕಾರಿ ಕಿರಣ್ ಕಾಪು ಉಪಸ್ಥಿತರಿದ್ದರು.
ಕಾಪು ವಲಯದ ಅಧ್ಯಕ್ಷರಾದ ಸಚಿನ್ ಉಚ್ಚಿಲ ಸ್ವಾಗತಿಸಿ, ಪ್ರಸ್ತಾವನೆಗೈದರು. ಅಶ್ವತ್ ಪೂಜಾರಿ ನಿರೂಪಿಸಿದರು. ವಲಯದ ಪ್ರಧಾನ ಕಾರ್ಯದರ್ಶಿ
ರಾಘವೇಂದ್ರ ಭಟ್ ವಂದಿಸಿದರು.
