ಹೆಜಮಾಡಿ ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗ - ಶೂ, ಸಾಕ್ಸ್ ವಿತರಣೆ ; ಆರೋಗ್ಯ ಮಾಹಿತಿ ಕಾರ್ಯಕ್ರಮ
ಹೆಜಮಾಡಿ : ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹೆಜಮಾಡಿ ಇಲ್ಲಿ ಸರಕಾರದ ವತಿಯಿಂದ ನೀಡಲಾಗುವ ಶೂ,ಸಾಕ್ಸ್ ವಿತರಣಾ ಕಾರ್ಯಕ್ರಮ ಸೋಮವಾರ ಜರಗಿತು.
ಶಿಕ್ಷಕರಿಂದ ಸಾಂಕ್ರಾಮಿಕ ರೋಗಗಳು, ಮಾದಕ ವಸ್ತುಗಳು ಮತ್ತು ಆರೋಗ್ಯದ ಕುರಿತು ಅರಿವು ಮೂಡಿಸಲಾಯಿತು. ಶಿಕ್ಷಕಿ ದೀಪಾ ಉಡುಪ ರವರು ಪರೀಕ್ಷಾ ಕ್ರಮಗಳ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು.
ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಸತೀಶ್ ನಾಯಕ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭ ಸಂಸ್ಥೆಯ ಹಳೆ ವಿದ್ಯಾರ್ಥಿ, ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೋಹನ್ ಸುವರ್ಣ, ಪಂಚಾಯತ್ ಸದಸ್ಯ ಪಾಂಡುರಂಗ ಕರ್ಕೇರ, ಎಸ್ ಡಿ ಎಮ್ ಸಿಯ
ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಿರಿಯ ಶಿಕ್ಷಕಿ ಸಂಪಾವತಿ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಸಿದರು. ಶಿಕ್ಷಕಿಯರಾದ ಅನಿತಾ ಕಾರ್ಯಕ್ರಮ ನಿರೂಪಿಸಿ, ಸರೋಜಾ ಆಚಾರಿ ವಂದಿಸಿದರು.
