ಕುಲಾಲ ಸಮಾಜ ಸೇವಾ ಸಂಘ ಬೆಳಪು : ವಾರ್ಷಿಕ ಮಹಾಸಭೆ, ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ
Thumbnail
ಕಾಪು : ತಾಲೂಕಿನ ಕುಲಾಲ ಸಮಾಜ ಸೇವಾ ಸಂಘ ಬೆಳಪು ಇದರ ಮಹಾಸಭೆಯು ಬೆಳಪು ವ್ಯವಸಾಯ ಸೇವಾ ಸಹಕಾರಿ ಸಂಘ ಪಣಿಯೂರು ಇದರ ಸಭಾಂಗಣದಲ್ಲಿ ಜರಗಿತು. ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಕುಲಾಲ ಸಮಾಜದ ಕುಲಾಲ ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನದ ವ್ಯವಸ್ಥೆ ಜೊತೆಗೆ ಬೆಳಪು ಭಾಗದಲ್ಲಿ ಆಗುವ ಕಾರ್ಖಾನೆಯಲ್ಲಿ ಕುಲಾಲ ಸಮುದಾಯದವರಿಗೆ ಉದ್ಯೋಗ ಕಲ್ಪಿಸಿ ಕೊಡುವುದಾಗಿ ಹೇಳಿದರು. ಈ ಸಂದರ್ಭ ಕುಲಾಲ ಸಮುದಾಯದ ಬಾಲ ಪ್ರತಿಭೆ ಮನಸ್ವಿ ಕುಲಾಲ್ ಅವರನ್ನು ಸನ್ಮಾನಿಸಲಾಯಿತು. ಕಲಿಕೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷರಾದ ಸುಧಾಕರ್ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಸಂಘದ ಗೌರವ ಅಧ್ಯಕ್ಷ ರಾದ ಕುಟ್ಟಿ ಮೂಲ್ಯ, ಉಪಾಧ್ಯಕ್ಷ ಪ್ರಕಾಶ್ ಕುಲಾಲ್, ಸಂದೀಪ್ ಮೂಲ್ಯ, ಗೀತಾ ವೈ, ಉಮೇಶ್ ಕುಲಾಲ್, ಜನಾರ್ದನ್ ಕುಲಾಲ್, ನಿತೇಶ್ ಕುಲಾಲ್ ಉಪಸ್ಥಿತರಿದ್ದರು. ಸಂಘದ ಕೋಶಾಧಿಕಾರಿ ಹರೀಶ್ ಕುಲಾಲ್ ವಾರ್ಷಿಕ ವರದಿ ಮಂಡಿಸಿದರು. ಮಲ್ಲಿಕಾ ಉಮೇಶ್ ಮಹಿಳಾ ಘಟಕದ ವರದಿ ಮಂಡಿಸಿದರು. ಸುಜಯ ಕುಲಾಲ್ ಸ್ವಾಗತಿಸಿದರು. ಸತೀಶ್ ಕುಲಾಲ್ ಕುಂಜೂರು ಕಾರ್ಯಕ್ರಮ ನಿರೂಪಿಸಿದರು. ಪವಿತ್ರ ಕುಲಾಲ್ ವಂದಿಸಿದರು.
Additional image
02 Aug 2024, 08:51 AM
Category: Kaup
Tags: