ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಣಿಯೂರು : ಶೈಕ್ಷಣಿಕ ಪರಿಕರಗಳ ವಿತರಣೆ
Thumbnail
ಕಾಪು : ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಣಿಯೂರು ಇಲ್ಲಿ 2024 -25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅದಾನಿ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ನೀಡಲಾದ ಶೈಕ್ಷಣಿಕ ಪರಿಕರಗಳನ್ನು ಬೆಳಪು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಡಾ| ದೇವಿ ಪ್ರಸಾದ್ ಶೆಟ್ಟಿ ವಿತರಿಸಿದರು. ಅದಾನಿ ಸಂಸ್ಥೆಯಿಂದ ಮಕ್ಕಳಿಗಾಗಿ ಕೊಡೆ, ನೋಟ್ಸ್ ಪುಸ್ತಕ, ಬ್ಯಾಗು ಹಾಗೂ ಮಹೇಶ್ ಬೆಳಪು ಇವರು ವಿದ್ಯಾರ್ಥಿಗಳಿಗೆ ಉಚಿತ ಐಡಿ ಕಾರ್ಡ್ ನೀಡಿದರು. ಈ ಸಂದರ್ಭ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಭೋಜ ದೇವಾಡಿಗ, ಉಪಾಧ್ಯಕ್ಷರಾದ ಸುಜಯ, ಮಹೇಶ್ ಬೆಳಪು, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಸಾವಿತ್ರಿ, ಶಾಲಾ ಶಿಕ್ಷಕ ವೃಂದ, ಮಕ್ಕಳು, ಪೋಷಕರು ಉಪಸ್ಥಿತರಿದ್ದರು.
07 Aug 2024, 09:24 PM
Category: Kaup
Tags: