ಆಗಸ್ಟ್ 16 : ಶ್ರೀ ವಿಷ್ಣು ಕಲಾವೃಂದ ಗಾಂಧಿನಗರ, ಶಿರ್ವ - 11ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತ
ಶಿರ್ವ : ಶ್ರೀ ವಿಷ್ಣು ಕಲಾವೃಂದ ಗಾಂಧಿನಗರ, ಶಿರ್ವ ಇದರ ವತಿಯಿಂದ ಆಗಸ್ಟ್ 16, ಶುಕ್ರವಾರ ಬೆಳಿಗ್ಗೆ ಗಂಟೆ 9 ರಿಂದ 11ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆಯು ಗಾಂಧಿನಗರ ಕಲಾ ವೃಂದದ ವೇದಿಕೆಯಲ್ಲಿ ಜರಗಲಿದೆ.
ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಕಲಶ ಪ್ರತಿಷ್ಠೆ, ಚೂಡಿ ಪೂಜೆ, ಕುಂಕುಮಾರ್ಚನೆ, ಭಜನಾ ಕಾರ್ಯಕ್ರಮ, ಮಂಗಳಾರತಿ ಮಹಾಪೂಜೆ, ಅನ್ನ ಸಂತರ್ಪಣೆಯು ನಡೆಯಲಿದೆ ಎಂದು ಶ್ರೀ ವಿಷ್ಣು ಕಲಾವೃಂದದ ಪ್ರಕಟಣೆ ತಿಳಿಸಿದೆ.
