ಕಾಪು ರಾಷ್ಟ್ರೀಯ ಹೆದ್ದಾರಿ ವಿಭಾಜಕದಲ್ಲಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ
Thumbnail
ರಾ.ಹೆ. 66ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಡಿವೈಡರ್ ಮೇಲಿನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಯುವತಿಯೋರ್ವಳು ಮೃತಪಟ್ಟ ಘಟನೆ ಶುಕ್ರವಾರ ಕಾಪುವಿನಲ್ಲಿ ನಡೆದಿದೆ. ಅಪಘಾತದಲ್ಲಿ ಆಶ್ರಿತಾ (24) ಎಂಬ ಯುವತಿ ಮೃತಪಟ್ಟಿದ್ದು, ನಿಹಾಲ್, ಅನೀಷ್, ನಿನಾದ್ ಮತ್ತು ಅಥರ್ವ ಗಾಯಗೊಂಡಿದ್ದಾರೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರು ಕಾಪು ಹಳೇ ಮೆಸ್ಕಾಂ ಕಛೇರಿ ಬಳಿ ಚಾಲಕನ ನಿಯಂತ್ರಣ ತಪ್ಪಿ, ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ವಿದ್ಯುತ್ ಕಂಬ ಉರುಳಿ ಬಿದ್ದಿದೆ.
ಮುಂಬಯಿಯಿಂದ ಆಗಮಿಸಿದ್ದ ಯುವಕರ ತಂಡ ಕಾರಿನಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಎಸ್ಸೈ ರಾಜಶೇಖರ ಬಿ. ಸಾಗನೂರು, ಕ್ರೈಂ ಎಸ್ಸೈ ಐ.ಆರ್. ಗಡ್ಡೇಕರ್ ಮೊದಲಾದವರು ಭೇಟಿ ನೀಡಿದ್ದಾರೆ.
Additional image Additional image Additional image
11 Sep 2020, 04:34 PM
Category: Kaup
Tags: