ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು : ಆನ್ ಲೈನ್ ವ್ಯಾಸಂಗ, ಸಮಾಲೋಚನೆ ಕೋರ್ಸ್‌ಗಳ ಆರಂಭ
Thumbnail
ಉಚ್ಚಿಲ : ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು ವತಿಯಿಂದ ಉಡುಪಿ ಜಿಲ್ಲೆಯ 20 ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರಾಯೋಗಿಕ ಐ.ಐ.ಟಿ - ಮದ್ರಾಸ್ ಇವರಿಂದ ಆನ್ ಲೈನ್ ವ್ಯಾಸಂಗ ಹಾಗೂ ಸಮಾಲೋಚನೆ ಕೋರ್ಸ್‌ಗಳ ಆರಂಭ ಸಮಾರಂಭ ಗುರುವಾರ ಉಚ್ಚಿಲ ಮಹಾಲಕ್ಷ್ಮಿ ಸಭಾಭವನದಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಐ.ಐ.ಟಿ - ಮದ್ರಾಸ್ ಇವರಿಂದ ನೀಡುವ ಆನ್ ಲೈನ್ ವ್ಯಾಸಂಗ ಹಾಗೂ ಸಮಾಲೋಚನೆ ಕೋರ್ಸ್‌ಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು ಅಧ್ಯಕ್ಷರಾದ ಡಾ. ಹೆಜ್.ಎಸ್ ಶೆಟ್ಟಿ, ಐ.ಐ.ಟಿ ಮದ್ರಾಸ್ ಪ್ರವರ್ತಕ ಟೆಕ್ನಾಲಜಿ ಚನೈ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಎಂ.ಜೆ ಶಂಕರಮಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಹೊಸ ಹೊಸ ದಿಗಂತ ಕನ್ನಡ ದೈನಿಕ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪಿ.ಎಸ್ ಪ್ರಕಾಶ್, ಶಾಲಾ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಕೆ ಗಣಪತಿ, ಉಡುಪಿ ಜಿಲ್ಲಾ ಪದವಿ ಪೂರ್ವ ವಿಭಾಗದ ಉಪ ನಿರ್ದೇಶಕರಾದ ಮಾರುತಿ, ಐ.ಐ.ಟಿ ಮದ್ರಾಸ್ ಮುಖ್ಯ ನಿರ್ವಹಣಾಧಿಕಾರಿಗಳಾದ ಜಿ. ವೀರರಾಘವನ್ ಉಪಸ್ಥಿತರಿದ್ದರು.
Additional image Additional image
15 Aug 2024, 04:21 PM
Category: Kaup
Tags: