ಶಿರ್ವ ಸೈಂಟ್ ಮಿಲಾಗ್ರಿಸ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ : ಸ್ವಾತಂತ್ರ್ಯೋತ್ಸವ ಆಚರಣೆ ; ಆಕ್ಸಿಲಿಯಮ್ ನಿವಾಸ ಭೇಟಿ
Thumbnail
ಶಿರ್ವ : ಸೈಂಟ್ ಮಿಲಾಗ್ರಿಸ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿ. ಕಾರವಾರ ಇದರ ಶಿರ್ವ ಶಾಖೆ ವತಿಯಿಂದ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಕ್ಸಿಲಿಯಮ್ ನಿವಾಸ ಶಿರ್ವ ಇಲ್ಲಿನ 43 ಮಕ್ಕಳಿಗೆ ಬೆಡ್‌ಶೀಟ್ ಮತ್ತು ಸಿಹಿ ತಿಂಡಿ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ಶಿರ್ವ ಚರ್ಚಿನ ಪ್ರಧಾನ ಧರ್ಮಗುರು ಫಾ| ಲೆಸ್ಲಿ ಡಿಸೋಜ, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ಪೂಜಾರಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿಲ್ಸನ್ ರೋಡ್ರಿಗಸ್, ಪಂಚಾಯತ್ ಸದಸ್ಯೆ ಜೆಸಿಂತಾ ಡಿಸೋಜ, ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ಆರಾನ್ಹ, ಉಪಸ್ಥಿತರಿದ್ದರು. ಆಕ್ಸಿಲಿಯಮ್ ಕಾನ್ವೆಂಟಿನ ಮೇಲ್ವಿಚಾರಕಿ ಸೀ.ಲೀಮಾ, ಧರ್ಮ ಭಗಿನಿಯರು, ಶಿರ್ವ ಶಾಖೆಯ ಸಿಬ್ಬಂದಿಗಳು ಸಹಕಾರ ನೀಡಿದರು. ಸೈಂಟ್ ಮಿಲಾಗ್ರಿಸ್ ಸಹಕಾರಿ ಶಿರ್ವ ಶಾಖಾ ವ್ಯವಸ್ಥಾಪಕಿ ಪ್ರಮೀಳ ಲೋಬೋ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಾಯಕ ವ್ಯವಸ್ಥಾಪಕ ವಿಲ್ಸನ್ ಡಿಸೋಜ ಸ್ವಾಗತಿಸಿದರು. ಶಾಖಾ ಸಿಬ್ಬಂದಿ ಬ್ಲೆಸ್ಸಿ ಜಾಜ್೯ ನಿರೂಪಿಸಿದರು. ವಿದ್ಯಾರ್ಥಿಗಳಿಂದ ಗಾಯನ, ನೃತ್ಯರೂಪಕ ಜರಗಿತು.
Additional image Additional image
16 Aug 2024, 10:16 PM
Category: Kaup
Tags: