ಕಾರ್ಕಳ ಪ್ರಭಾರ ತಹಶೀಲ್ದಾರ್ ಆಗಿ ಪ್ರತಿಭಾ.ಆರ್ ಅಧಿಕಾರ ಸ್ವೀಕಾರ
ಕಾರ್ಕಳ : ಕಾಪು ತಾಲೂಕಿನ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಕಾರ್ಕಳ ತಾಲೂಕು ಪ್ರಭಾರ ತಹಶೀಲ್ದಾರ್ ಆಗಿ ಶನಿವಾರದಂದು ಅಧಿಕಾರ ಸ್ವೀಕರಿಸಿದರು.
ಕಾರ್ಕಳ ತಹಶೀಲ್ದಾರ್ ನರಸಪ್ಪ ಅವರು ಬಳ್ಳಾರಿಗೆ ವರ್ಗಾವಣೆಗೊಂಡಿದ್ದು, ನೂತನ ತಹಶೀಲ್ದಾರ್ ನಿಯೋಜನೆಯಾಗದ ಹಿನ್ನೆಲೆ ಪ್ರತಿಭಾ ಆರ್. ಪ್ರಭಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಉಪತಹಶೀಲ್ದಾರ್ ಮಂಜುನಾಥ್ ನಾಯಕ್, ಲಕ್ಷ್ಮೀ, ನಮಿತಾ, ಕಂದಾಯ ನಿರೀಕ್ಷಕರಾದ ಶಿವಪ್ರಸಾದ್, ರಿಯಾಜ್ ಅಹಮದ್ ಸೇರಿದಂತೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
