ರಾಜ್ಯಪಾಲರ ವಿರುದ್ಧ ಎಂಎಲ್‌ಸಿ ಐವನ್ ಡಿಸೋಜ ಹೇಳಿಕೆ ಆರೋಪ : ಕಾಪು ಠಾಣೆಯಲ್ಲಿ ದೂರು ದಾಖಲು
Thumbnail
ಕಾಪು : ಕರ್ನಾಟಕ ರಾಜ್ಯಪಾಲ ತಾವರ್‌ಚಂದ್‌ ಗೆಹ್ಲೋಟ್‌ರವರ ಬಗ್ಗೆ ವಿಧಾನ ಪರಿಷತ್‌ ಸದಸ್ಯ   ಐವನ್ ಡಿಸೋಜರವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಕಾಪು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಕಾಪು ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕಾಪು ಮಂಡಲ ಹಿಂದುಳಿದ ಮೋರ್ಚಾದ ಅಧ್ಯಕ್ಷ ಸಂತೋಷ್ ಮೂಡುಬೆಳ್ಳೆಯವರ ನೇತೃತ್ವದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್‌ ಖಾದರ್‌ ಅವರಿಗೆ ದೂರು ನೀಡಿ, ಐವನ್‌ ಡಿಸೋಜರವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಈ ಸಂದರ್ಭ ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ ನಾಯಕ್, ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾಧ್ಯಕ್ಷ ವಿಜಯ್ ಕೊಡವೂರು,  ಪ್ರಧಾನ ಕಾರ್ಯದರ್ಶಿ ರವಿ ಕೋಟ್ಯಾನ್ ಉದ್ಯಾವರ, ಸುರೇಖಾ ಶೈಲೇಶ್, ಯುವ ಮೋರ್ಚಾ ಅಧ್ಯಕ್ಷ  ಸೋನು ಪಾಂಗಾಳ ಮತ್ತು ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.
22 Aug 2024, 06:57 PM
Category: Kaup
Tags: