ಪಡುಬಿದ್ರಿ : ಕಂಚಿನಡ್ಕ ಟೋಲ್ ತಡೆ ಆದೇಶ - ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
Thumbnail
ಪಡುಬಿದ್ರಿ : ಇಲ್ಲಿನ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಟೋಲ್ ಗೇಟ್ ಗೆ ಸರಕಾರದಿಂದ ತಾತ್ಕಾಲಿಕ ತಡೆ ನೀಡಿದ ಹಿನ್ನೆಲೆಯಲ್ಲಿ ಪಡುಬಿದ್ರಿ ಪೇಟೆಯಲ್ಲಿ ಶುಕ್ರವಾರ ಸಂಜೆ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ನೇತೃತ್ವದಲ್ಲಿ ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚಿ ಸಂಭ್ರಮಾಚರಿಸಲಾಯಿತು. ಕಳೆದ ಬುಧವಾರ ಪಡುಬಿದ್ರಿಯ ಕಂಚಿನಡ್ಕದಲ್ಲಿ ಟೋಲ್ ರದ್ಧತಿ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಆಯೋಜನೆಯಲ್ಲಿ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿತ್ತು. ಗುರುವಾರ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನಿಯೋಗ ಲೋಕೋಪಯೋಗಿ ಸಚಿವ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಟೋಲ್ ರದ್ದತಿಗೆ ಮನವಿ ಸಲ್ಲಿಸಿ ಇಲ್ಲಿಯ ವಸ್ತುಸ್ಥಿತಿಯನ್ನು ಸಚಿವರಿಗೆ ಮನವರಿಕೆ ಮಾಡಿದ್ದರು. ಅದರಂತೆ ಶುಕ್ರವಾರ ಲೋಕೋಪಯೋಗಿ ಸಚಿವರು ಕಂಚಿನಡ್ಕದಲ್ಲಿ ಟೋಲ್ ಗೇಟ್ ನಿರ್ಮಾಣವನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವ ಬಗ್ಗೆ ಆದೇಶ ಹೊರಡಿಸಿದ್ದು ಕಾಂಗ್ರೆಸ್ ನಿಯೋಗಕ್ಕೆ ಮೊದಲ ಹಂತದಲ್ಲಿ ಜಯ ಸಿಕ್ಕಿದಂತಾಗಿದೆ. ಈ ಸಂದರ್ಭ ಕಾಂಗ್ರೆಸ್ ಮುಖಂಡರುಗಳಾದ ಗೀತಾ ವಾಗ್ಳೆ, ಶಾಂತಲತಾ ಶೆಟ್ಟಿ, ನವೀನ್ ಚಂದ್ರ ಜೆ ಶೆಟ್ಟಿ, ನವೀನ್ ಎನ್ ಶೆಟ್ಟಿ, ಶೇಖರ್ ಹೆಜಮಾಡಿ, ರಮೀಝ್ ಹುಸೇನ್, ಶರ್ಫುದ್ದೀನ್ ಶೇಖ್, ಅಝೀಝ್ ಕಣ್ಣಂಗಾರು, ವೈ ಸುಕುಮಾರ್, ಕರುಣಾಕರ ಪೂಜಾರಿ, ಅಶೋಕ್ ಸಾಲ್ಯಾನ್, ದೀಪಕ್ ಎರ್ಮಾಳು, ದಿವಾಕರ ಶೆಟ್ಟಿ, ವಿಶ್ವಾಸ್ ಅಮೀನ್, ಜ್ಯೋತಿ ಮೆನನ್, ಅಶೋಕ್ ನಾಯರಿ, ವೈ ಸುಧೀರ್ ಕುಮಾರ್, ಸುನಿಲ್ ಬಂಗೇರ, ಶಫಿ ಪಡುಬಿದ್ರಿ, ರಾಜೇಶ್ ಶೇರಿಗಾರ್, ಸಂತೋಷ್ ಪಡುಬಿದ್ರಿ, ಕೀರ್ತಿ ಪಡುಬಿದ್ರಿ, ಫಾರೂಕ್ ಚಂದ್ರನಗರ ಮತ್ತಿತರರು ಉಪಸ್ಥಿತರಿದ್ದರು.
Additional image
23 Aug 2024, 08:13 PM
Category: Kaup
Tags: