92ನೇ ಹೇರೂರಿನ ಶ್ರೀ ಗುರುರಾಘವೇಂದ್ರ ಸಮಾಜ ಸೇವಾ ಮಂಡಳಿಯಿಂದ ಮುದ್ದು ಕೃಷ್ಣ ವೇಷ ಸ್ಪರ್ಧೆ
Thumbnail
ಶಿರ್ವ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ, 92ನೇ ಹೇರೂರಿನ ಶ್ರೀ ಗುರುರಾಘವೇಂದ್ರ ಸಮಾಜ ಸೇವಾ ಮಂಡಳಿ (ರಿ.) ವತಿಯಿಂದ ಮುದ್ದು ಕೃಷ್ಣ ವೇಷ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಊರಿನ ಹೆಚ್ಚಿನ ಮಕ್ಕಳು ಸ್ಪರ್ಧೆಯಲ್ಲಿ ಪಾಲ್ಗೊಂಡರು. ತೀರ್ಪುಗಾರರಾಗಿ ಬಂಟಕಲ್ಲು ದುರ್ಗಾಪರಮೇಶ್ವರಿ ಶಾಲೆಯ ಮುಖ್ಯ ಶಿಕ್ಷಕಿ ಸಂಗೀತ ಪಾಟ್ಕರ್, ಪಡುಬೆಳ್ಳೆ ಶ್ರೀ ನಾರಾಯಣ ಗುರು ಪ್ರೌಢ ಶಾಲೆಯ ಶಿಕ್ಷಕರಾದ ದುರ್ಗಯ್ಯ ನಾಯಕ್ ಮತ್ತು ಸುಜಿತ್ ಕುಮಾರ್ ರವರು ಕಾರ್ಯನಿರ್ವಹಿಸಿದರು. ನಂತರ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ, ಮಂಡಳಿಯ ಅಧ್ಯಕ್ಷರಾದ ರಾಘವೇಂದ್ರ ಸ್ವಾಮಿ, ಕಾರ್ಯದರ್ಶಿ ಚರಣ್ ಎಸ್. ದೇವಾಡಿಗ ಹಾಗೂ ಮಹಿಳಾ ಬಳಗದ ಅಧ್ಯಕ್ಷರಾದ ಸುಂದರಿ ನಾರಾಯಣ ರಾವ್ ಉಪಸ್ಥಿತರಿದ್ದರು. ಉಪಾಧ್ಯಕ್ಷರಾದ ರಾಜೇಶ್ ಜೋಗಿ ಕಾರ್ಯಕ್ರಮ ನಿರೂಪಿಸಿದರು. ಸದಸ್ಯರಾದ ಮಾಧವ ಆಚಾರ್ಯ ವಂದಿಸಿದರು.
Additional image Additional image
27 Aug 2024, 07:19 AM
Category: Kaup
Tags: