ಉಚ್ಚಿಲ ದಸರಾ - 2024 ಆಮಂತ್ರಣ ಪತ್ರಿಕೆ ಬಿಡುಗಡೆ
Thumbnail
ಉಚ್ಚಿಲ : ದ.ಕ ಮೊಗವೀರ ಮಹಾಜನ ಸಂಘ ಅಧೀನದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ "ಉಚ್ಚಿಲ ದಸರಾ -2024" ರ ಆಮಂತ್ರಣ ಪತ್ರಿಕೆಯನ್ನು ಮೊಗವೀರ ಸಮಾಜದ ನಾಯಕ ನಾಡೋಜ ಡಾ. ಜಿ. ಶಂಕರ್ ಬಿಡುಗಡೆಗೊಳಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಕೆ.ವಿ.ರಾಘವೇಂದ್ರ ಉಪಾಧ್ಯಾಯರವರು ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ನಾಡೋಜ ಡಾ.ಜಿ.ಶಂಕರ್ ಮಾತನಾಡಿ, ಈ ಬಾರಿ ಅದ್ದೂರಿಯಾಗಿ ಉಚ್ಚಿಲ ದಸರಾ -2024 ನ್ನು ಆಚರಿಸಲಾಗುವುದು. ಉಚ್ಚಿಲ ದಸರ ಅಕ್ಟೋಬರ್ 3 ರಿಂದ ಅಕ್ಟೋಬರ್ 12ರವರೆಗೆ ನಡೆಯಲಿದ್ದು, ನೃತ್ಯ ವೈವಿಧ್ಯ ದೇಹದಾಢ್ಯಸ್ಪರ್ಧೆ, ಹೆಣ್ಣು ಮಕ್ಕಳ ಹುಲಿ ಕುಣಿತ ಸ್ಪರ್ಧೆ, ಸಾಮೂಹಿಕ ದಾಂಡಿಯ ನೃತ್ಯ ಇತ್ಯಾದಿ ವಿಶೇಷಗಳು ಇರಲಿವೆ. ಸರ್ವರು ಸಹಕರಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭ ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಮೊಗವೀರ ಮಹಾಜನ ಸಂಘದ ಮಹಿಳಾ ಮಂಡಳಿಯ ಅಧ್ಯಕ್ಷೆ ಉಷಾರಾಣಿ ಬೋಳೂರು, ಕಾಪು ನಾಲ್ಕುಪಟ್ಣ ಮೊಗವೀರ ಮಹಾ ಸಭಾದ ಅಧ್ಯಕ್ಷ ಮನೋಜ್ ಕಾಂಚನ್, ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಎಸ್ ಕರ್ಕೇರ, ಆಡಳಿತ ಮಂಡಳಿಯ ಸದಸ್ಯರು, ದೇವಳದ ಪ್ರಧಾನ ಪ್ರಬಂಧಕ ಸತೀಶ್ ಅಮೀನ್ ಪಡುಕೆರೆ ಮೊದಲಾದವರು ಉಪಸ್ಥಿತರಿದ್ದರು.
27 Aug 2024, 12:54 PM
Category: Kaup
Tags: