ಪ್ರಾಚೀನ ದೇಗುಲಗಳನ್ನು ಮೀರಿಸುವ ಮರದ ಮತ್ತು ಕಲ್ಲಿನ ಶಿಲ್ಪಕಲೆ : ಎಸ್.ಎಲ್. ಭೋಜೇಗೌಡ
Thumbnail
ಕಾಪು : ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ ಅವರು ಪತ್ನಿ ತರ್ಪಣ ಜೊತೆ ಕಾಪು ಮಾರಿಯಮ್ಮನ ಕ್ಷೇತ್ರಕ್ಕೆ ಬುಧವಾರ ಭೇಟಿ ನೀಡಿ ಮಾರಿಯಮ್ಮನ ದರುಶನ ಪಡೆದರು. ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರ ಸಮ್ಮುಖದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭ ಮಾತನಾಡಿದ ಅವರು ಈ ಭಾಗದಲ್ಲಿ ಎಲ್ಲಿಯೂ ನಡೆಯದಂತಹ ಕೆಲಸ ಕಾರ್ಯಗಳು ಈ ದೇವಸ್ಥಾನದಲ್ಲಿ ನಡೆಯುತ್ತಿದೆ. ಪ್ರಾಚೀನ ಕಾಲದ ಶಿಲ್ಪಕಲೆಗಳನ್ನು ಮೀರಿಸುವ ಮರದ ಮತ್ತು ಕಲ್ಲಿನ ಕೆತ್ತನೆಗಳು ಅತ್ಯದ್ಭುತವಾಗಿ ಮೂಡಿ ಬಂದಿದ್ದು, ಎಲ್ಲರೂ ಒಮ್ಮೆ ಇಲ್ಲಿಗೆ ಭೇಟಿ ನೀಡಿ ಕಣ್ತುಂಬಿಕೊಳ್ಳಬೇಕು ಎಂದರು. ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ, ಅಭಿವೃದ್ಧಿ ಸಮಿತಿಯ ಗೌರವ ಸಲಹೆಗಾರ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕ ಶ್ರೀಕರ ಶೆಟ್ಟಿ ಕಲ್ಯಾ, ಪ್ರಚಾರ ಸಮಿತಿಯ ಸಂಚಾಲಕ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಚೇರಿ ನಿರ್ವಾಹಕ ಜಯರಾಮ ಆಚಾರ್ಯ, ಅಭಿವೃದ್ಧಿ ಸಮಿತಿಯ ಕಚೇರಿ ನಿರ್ವಹಣಾ ಸಮಿತಿಯ ಪ್ರಧಾನ ಸಂಚಾಲಕ ಮಧುಕರ್ ಎಸ್, ಕಾಪು ಪುರಸಭಾ ಸದಸ್ಯ ಅನಿಲ್ ಕುಮಾರ್ ಕಾಪು, ಪ್ರಚಾರ ಸಮಿತಿಯ ಸಂಚಾಲಕ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಪ್ರಬಂಧಕ ಗೋವರ್ಧನ್ ಸೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Additional image Additional image
28 Aug 2024, 08:31 PM
Category: Kaup
Tags: