ಕಾಪು : ಕಳತ್ತೂರು ಪಿ.ಕೆ.ಎಸ್ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ; ಸನ್ಮಾನ
Thumbnail
ಕಾಪು : ತಾಲೂಕಿನ ಪೈಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ಪೇದೆಗೆ ಸನ್ಮಾನ ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಶುಭ ಹಾರೈಸಿದರು. ಸನ್ಮಾನ / ಪುರಸ್ಕಾರ : 33 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಸಂಸ್ಥೆಯ ಪೇದೆ ನಾರಾಯಣರವರಿಗೆ ಸನ್ಮಾನ ಹಾಗೂ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಿಧ್ಯಾವರ್ಧಕ ಸಂಘದ ಸಂಚಾಲಕರಾದ ಶಿವರಾಮ ಶೆಟ್ಟಿ, ವಿಧ್ಯಾವರ್ಧಕ ಸಂಘ ಪಿ.ಕೆ.ಎಸ್ ಪ್ರೌಢಶಾಲೆ ಅಧ್ಯಕ್ಷರಾದ ನಿತ್ಯಾನಂದ ಆರ್ ಶೆಟ್ಟಿ, ವಿಧ್ಯಾವರ್ಧಕ ಸಂಘದ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಗುರ್ಮೆ, ಸದಸ್ಯರಾದ ವೇಣುಗೋಪಾಲ ಎಂ, ಲವ ಶೆಟ್ಟಿ, ಗೋಪಾಲಕೃಷ್ಣ ಭಟ್, ಯೋಗೀಶ್ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಶೆಟ್ಟಿ ಪೈಯಾರು, ಮುಖ್ಯ ಶಿಕ್ಷಕರಾದ ಗಂಗಾ ನಾಯ್ಕ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Additional image Additional image Additional image
30 Aug 2024, 06:49 AM
Category: Kaup
Tags: