ನಾಳೆ (ಸೆ. 3) : ಕಾಪು ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞ ಸಮಿತಿ ಉದ್ಘಾಟನೆ ಮತ್ತು ಲೇಖನ ಸಂಕಲ್ಪ
ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ
ಜೀರ್ಣೋದ್ದಾರ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸೆಪ್ಟೆಂಬರ್ 3ರಂದು ನವದುರ್ಗಾ ಲೇಖನ ಯಜ್ಞ ಮತ್ತು ನವಚಂಡಿಕಾಯಾಗ ಜರಗಲಿದೆ.
ದೇವಸ್ಥಾನದ ಪ್ರಧಾನ ತಂತ್ರಿಗಳಾದ ವಿದ್ವಾನ್ ಕೆ ಪಿ ಕುಮಾರಗುರು ತಂತ್ರಿ ಅವರ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಇವರ ಉಪಸ್ಥಿತಿಯಲ್ಲಿ ಮಂಗಳ ಗೌರಿ ಪೂಜೆ ಮತ್ತು ಲೇಖನ ಸಂಕಲ್ಪಕ್ಕೆ ಚಾಲನೆ ನೀಡಲಾಗುವುದು. ಬೆಳಿಗ್ಗೆ 8.30 ಕ್ಕೆ ಅಮ್ಮನ ಸನ್ನಿಧಾನದಲ್ಲಿ ಪ್ರಾರ್ಥನೆ, 8:40 ಕ್ಕೆ ಲೇಖನ ಸಂಕಲ್ಪಕ್ಕೆ ಭಕ್ತಾದಿಗಳನ್ನು ಮಂಗಳ ಗೌರಿ ಮಂಟಪಕ್ಕೆ ಕರೆದೊಯ್ಯುವುದು, 8:50 ಕ್ಕೆ ಲೇಖನ ಸಂಕಲ್ಪದ ಭಕ್ತರು ಆಸೀನರಾಗುವುದು, 9ಕ್ಕೆ ಮಂಗಳ ಗೌರಿ ಪೂಜೆ ಮತ್ತು ಲೇಖನ ಸಂಕಲ್ಪ ಆರಂಭ, 10.15 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಅವದೂತ ವಿನಯ್ ಗುರೂಜಿ, ಗೌರಿಗದ್ದೆ ಉದ್ಘಾಟಿಸಲಿದ್ದಾರೆ. 12 ಗಂಟೆಗೆ ಮಹಾ ಮಂಗಳಾರತಿ, ಮಧ್ಯಾಹ್ನ 1 ಗಂಟೆಗೆ ಪ್ರಸಾದ ಭೋಜನ ವಿತರಣೆ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.
