ಕಾಪು : ಸರಕಾರಿ ಉರ್ದು ಸಂಯುಕ್ತ ಪ್ರೌಢಶಾಲೆ ಮಲ್ಲಾರು - ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ
Thumbnail
ಕಾಪು : ತಾಲೂಕಿನ ಸರಕಾರಿ ಉರ್ದು ಸಂಯುಕ್ತ ಪ್ರೌಢಶಾಲೆ ಮಲ್ಲಾರು ಇಲ್ಲಿ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ಬುಧವಾರ ಆಚರಿಸಲಾಯಿತು. ಶಿಕ್ಷಕರಿಗೆ ಮನೋರಂಜನಾತ್ಮಕ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸುವ ಮೂಲಕ ಗುರುವಂದನೆ ಸಲ್ಲಿಸಲಾಯಿತು. ಬಶೀರ್ ಅಹ್ಮದ್ ಸಭಾಧ್ಯಕ್ಷತೆ ವಹಿಸಿದ್ದರು. ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಫೂರ್ ಅಹ್ಮದ್, ಉಪಾಧ್ಯಕ್ಷರಾದ ಮಹೇಶ್ ಬೆಳಪು, ಕಾರ್ಯದರ್ಶಿಯಾದ ಅಲ್ತಾಫ್ ಮಲ್ಲಾರ್, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವೀಣಾ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಕಾತುನ್ ಬಿ, ಮೌಲಾನಾ ಶಾಲೆಯ ಮುಖ್ಯೋಪಾಧ್ಯಾಯರಾದ ವಿದ್ಯಾ, ಕಾಪು ಪುರಸಭಾ ಸದಸ್ಯರಾದ ನೂರುದ್ದೀನ್, ದಾನಿಗಳಾದ ಷಫೀಕಾಝಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ರಾಜೇಂದ್ರ ಸ್ವಾಗತಿಸಿದರು. ಹಸೀನಾ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಕಾತುನ್ ಬಿ ವಂದಿಸಿದರು.
04 Sep 2024, 07:17 PM
Category: Kaup
Tags: