ಉಚ್ಚಿಲ ರೋಟರಿ ಕ್ಲಬ್ ವತಿಯಿಂದ ಶಿಕ್ಷಕರಿಗೆ ಸನ್ಮಾನ
Thumbnail
ಉಚ್ಚಿಲ : ಶಿಕ್ಷಕರ ದಿನಾಚರಣೆ ಅಂಗವಾಗಿ ಉಚ್ಚಿಲ ರೋಟರಿ ಕ್ಲಬ್ ವತಿಯಿಂದ ಉಚ್ಚಿಲ ಸರಸ್ವತಿ ಮಂದಿರ ಶಾಲೆಯ 6 ಶಿಕ್ಷಕರನ್ನು ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ 3ನೇ ರ‍್ಯಾಂಕ್‌ ಪಡೆದ ಓರ್ವ ವಿದ್ಯಾರ್ಥಿಯನ್ನು ಸನ್ಮಾನಿಸಲಾಯಿತು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ, ರಾಜ್ಯದಲ್ಲಿ 3ನೇ ರ‍್ಯಾಂಕ್‌ ಪಡೆದ ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ವಿದ್ಯಾರ್ಥಿಯಾಗಿದ್ದ ಸಮಥ್೯ ಜೋಶಿ, ಶಾಲೆಯ ಮುಖ್ಯ ಶಿಕ್ಷಕ ಬಾಬುರಾಯ ಆಚಾರ್ಯ, ಶಿಕ್ಷಕರಾದ ಸದಾಶಿವ ನಾಯಕ್, ಮಮತ, ವಿಜಯಲಕ್ಷ್ಮಿ, ಜ್ಯೋತಿ, ಪ್ರಗತಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಚ್ಚಿಲ ರೋಟರಿ ಅಧ್ಯಕ್ಷರಾದ ಇಬಾದುಲ್ಲ ವಹಿಸಿದ್ದರು. ಈ ಸಂದರ್ಭ ರೋಟರಿ ಕ್ಲಬ್ ಸದಸ್ಯರಾದ ಕಾರ್ಯದರ್ಶಿ ಸತೀಶ್ ಕುಂಡಂತಾಯ, ಅಚ್ಯುತ ಶೆಣೈ, ನಜ್ಮ, ಚಂದ್ರಹಾಸ ಪೂಜಾರಿ, ಸತೀಶ್ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.
06 Sep 2024, 02:03 PM
Category: Kaup
Tags: