ಕಾಪು ವೃತ್ತದ ಪ್ರಾಥಮಿಕ ಶಾಲಾ ಕ್ರೀಡಾಕೂಟ ಸಮಾರೋಪ
Thumbnail
ಕಾಪು : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಮತ್ತು ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯಚೈತನ್ಯ ಹೈಸ್ಕೂಲ್ ಕುತ್ಯಾರು ಆಶ್ರಯದಲ್ಲಿ ಕಾಪು ವೃತ್ತದ ಪ್ರಾಥಮಿಕ ಶಾಲಾ ಕ್ರೀಡಾಕೂಟದ ಸಮಾರೋಪವು ಸಂಸ್ಥೆಯ ಕ್ರೀಡಾಂಗಣದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿ ಅಸ್ಸೆಟ್ ಕಾರ್ಯದರ್ಶಿ ಗುರುರಾಜ ಕೆ.ಜೆ ಮಾತನಾಡಿ, ಪ್ರಥಮ ಬಾರಿಗೆ ಸಂಸ್ಥೆಯಲ್ಲಿ ಕ್ರೀಡಾಕೂಟವನ್ನು ಸಂಘಟಿಸಲು ಸಹಕರಿಸಿದ ಶಾಲಾ ಶಿಕ್ಷಣ ಇಲಾಖೆ ಮತ್ತು ದಾನಿಗಳಿಗೆ ಕೃತಜ್ಞತೆ ವ್ಯಕ್ತಪಡಿಸಿದರು. ಶಿರ್ವದ ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಗೆ ಸಮಗ್ರ ಚಾಂಪಿಯನ್ ಪ್ರಶಸ್ತಿ. ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ದಂಡತೀರ್ಥ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಉಳಿಯಾರಗೋಳಿಯ ಮಹಮ್ಮದ್ ಅಯಾನ್ ಮತ್ತು ಚಿರಾಗ್ ಬಾಲಕರ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ , ಶಿರ್ವದ ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ನಿಶಾ ಮತ್ತು ಅನುಷಾ ಬಾಲಕಿಯರ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಗಳಿಸಿದರು. ಬಾಲಕರ ವಿಭಾಗದ ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ದಂಡತೀರ್ಥ ಶಾಲೆ ಉಳಿಯಾರಗೋಳಿ, ಬಾಲಕಿಯರ ವಿಭಾಗದ ಚಾಂಪಿಯನ್ ಮತ್ತು ಕ್ರೀಡಾಕೂಟದ ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ಶಿರ್ವದ ಡಾನ್ ಬಾಸ್ಕೋ ಶಿಕ್ಷಣ ಸಂಸ್ಥೆ ಗಳಿಸಿತು. ಅಸ್ಸೆಟ್ ಪದಾಧಿಕಾರಿಗಳಾದ ವಿವೇಕ ಆಚಾರ್ಯ, ಜನಾರ್ದನ ಆಚಾರ್ಯ ಬಜಕೂಡ್ಲು, ಸುಂದರ ಆಚಾರ್ಯ ಮರೋಳಿ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ಕಿರಣ್ ಶೆಟ್ಟಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ವೇಣುಗೋಪಾಲ್, ಶೈಕ್ಷಣಿಕ ಸಲಹೆಗಾರ ದಿವಾಕರ ಆಚಾರ್ಯ ಗೇರುಕಟ್ಟೆ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ಪ್ರಾಂಶುಪಾಲೆ ಸಂಗೀತ ರಾವ್ ಸ್ವಾಗತಿಸಿ, ಶಿಕ್ಷಕಿ ರಮ್ಯ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ ಆಚಾರ್ಯ ವಂದಿಸಿದರು.
Additional image
25 Sep 2024, 09:59 AM
Category: Kaup
Tags: