ನ. 16 - 18 : ಪಡುಬಿದ್ರಿಯಲ್ಲಿ ಕಡಲ್ ಫಿಶ್ ಕ್ರಿಕೆಟರ್ಸ್ ವತಿಯಿಂದ ರಾಷ್ಟ್ರ ಮಟ್ಟದ ಕ್ರಿಕೆಟ್ ಪಂದ್ಯಾವಳಿ
ಪಡುಬಿದ್ರಿ : ಕಡಲ್ ಫಿಶ್ ಕ್ರಿಕೆಟರ್ಸ್ ಪಡುಬಿದ್ರಿ ವತಿಯಿಂದ ನವೆಂಬರ್ 16ರಿಂದ 18ರವರೆಗೆ ರಾಷ್ಟ್ರ ಮಟ್ಟದ ಅಹರ್ನಿಶಿ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಪಡುಬಿದ್ರಿ ಬೋರ್ಡ್ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು
ಪಡುಬಿದ್ರಿ ಎಸ್.ಎಸ್.ಹೋಟೆಲ್ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಸುದ್ದಿಗೋಷ್ಠಿಯಲ್ಲಿ ತಂಡದ ಅಧ್ಯಕ್ಷ ಚೇತನ್ ಕುಮಾರ್ ಮಾಹಿತಿ ನೀಡಿದರು.
ವಿಜೇತರಿಗೆ ಪ್ರಥಮ ಕಡಲ್ ಫಿಶ್ ಟ್ರೋಫಿ ಸಹಿತ ನಗದು 5 ಲಕ್ಷ ರೂ., ದ್ವಿತೀಯ 3 ಲಕ್ಷ ರೂ. ಬಹುಮಾನವಿದೆ. ಪಂದ್ಯಾಕೂಟದಲ್ಲಿ ಮಧ್ಯಪ್ರದೇಶ, ಛತ್ತೀಸ್‌ಗಢ, ಮುಂಬಯಿ, ಹರ್ಯಾಣ, ಬೆಂಗಳೂರು, ಚಿತ್ರದುರ್ಗ, ಕೋಲಾರ ಸಹಿತ 25ಕ್ಕೂ ಅಧಿಕ ತಂಡಗಳು ಭಾಗವಹಿಸಲಿವೆ.
ಉಡುಪಿ ಮತ್ತು ದಕ್ಷಿಣ ಕನ್ನಡದ ತಂಡಗಳನ್ನು ಪಿನ್ ಕೋಡ್ ಮಾದರಿಯಲ್ಲಿ ಆಡಿಸಲಾಗುವುದು. ಇಲ್ಲಿ ವಿಜೇತ ತಂಡ ನೇರ ಫೈನಲ್ ಪ್ರವೇಶ ಪಡೆಯಲಿದೆ.
ಪಂದ್ಯಾವಳಿಯ ಉಳಿಕೆಯ ಹಣವನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದು ಸಂಘಟಕರ ಪರವಾಗಿ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ತಿಳಿಸಿದರು.
ಈ ಸಂದರ್ಭ ಅಶೋಕ್ ಸಾಲ್ಯಾನ್, ಪಾಂಡುರಂಗ ಕೋಟ್ಯಾನ್, ಕರುಣಾಕರ ಪೂಜಾರಿ, ರಮೀಝ್ ಹುಸೈನ್, ಸುಭಾಷ್ ಕಾಮತ್, ಕೃಷ್ಣ ಬಂಗೇರ, ಪ್ರಶಾಂತ್ ಸಾಲ್ಯಾನ್, ವಸಂತ್ ಮತ್ತಿತರರು ಉಪಸ್ಥಿತರಿದ್ದರು.
