ಅಕ್ಟೋಬರ್ 3 : ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಉಪ ಸಮಿತಿಯಾದ ಉಡುಪಿ ನಗರಸಭಾ ಸಮಿತಿಯ ಕಚೇರಿ ಉದ್ಘಾಟನಾ ಸಮಾರಂಭ
ಕಾಪು : ಉಡುಪಿ ನಗರಸಭಾ ವ್ಯಾಪ್ತಿಯ ಜನರನ್ನು ನವದುರ್ಗಾ ಲೇಖನ ಯಜ್ಞದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಉಡುಪಿಯ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಉಪ ಸಮಿತಿಯಾದ ಉಡುಪಿ ನಗರಸಭಾ ಸಮಿತಿಯ ಕಚೇರಿ ಉದ್ಘಾಟನಾ ಸಮಾರಂಭವು ಅಕ್ಟೋಬರ್ 3, ಗುರುವಾರ ಅಪರಾಹ್ನ 04:30ಕ್ಕೆ ನಡೆಯಲಿದೆ.
ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಅತ್ಯದ್ಬುತವಾಗಿ ಬಾಗಲಕೋಟೆಯ ಇಳಕಲ್ ಕೆಂಪು ವರ್ಣದ ಶಿಲೆಯಿಂದ ಶಿಲಾಮಯವಾಗಿ ನವಿಕೃತಗೊಳ್ಳುತ್ತಿದೆ. ಪ್ರಥಮ ಹಂತದ ಕಾಮಗಾರಿಯನ್ನು ಪೂರ್ಣಗೊಳಿಸಿ 2025 ರ ಫೆಬ್ರವರಿ 25 ರಿಂದ ಮೊದಲ್ಗೊಂಡು ಮಾರ್ಚ್ 5 ರ ವರೆಗೆ 9 ದಿನಗಳ ಧಾರ್ಮಿಕ, ಸಾಂಸ್ಕೃತಿಕ ಸಭಾ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಲಿದೆ. ಮಾರ್ಚ್ 2 ರಂದು ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ಗದ್ದುಗೆ ಪ್ರತಿಷ್ಠೆ ಹಾಗೂ ಮಾರ್ಚ್ 5 ರಂದು ದೇವಳದ ಬ್ರಹ್ಮಕಲಶೋತ್ಸವವು ನಡೆಯಲಿದೆ.
ಆ ಪ್ರಯುಕ್ತ ನವದುರ್ಗಾ ಲೇಖನ ಯಜ್ಞ ಎಂಬ ಮಹಾ ಸಂಕಲ್ಪವನ್ನು ಸಾನಿಧ್ಯ ವೃದ್ಧಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಹಮ್ಮಿಕೊಂಡಿದೆ.
ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಉಡುಪಿ ಕ್ಷೇತ್ರದ ಶಾಸಕರು, ಎಲ್ಲಾ ವಾರ್ಡ್ ಗಳ ನಗರಸಭಾ ಸದಸ್ಯರು, ಹಾಗೂ ಅನೇಕ ಗಣ್ಯರು ಭಾಗವಹಿಸಲಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕಾಪು ಮಾರಿಯಮ್ಮನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಉಡುಪಿ ಜಿಲ್ಲೆಯ ನೇತ್ರತ್ವ ವಹಿಸಿರುವ ಸಾಯಿರಾಧಾ ಗ್ರೂಪ್ ನ ಆಡಳಿತ ನಿರ್ದೇಶಕರಾದ ಮನೋಹರ ಎಸ್.ಶೆಟ್ಟಿ , ಉಡುಪಿ ನಗರಸಭಾ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಉಡುಪಿ ನಗರಸಭಾ ಸಮಿತಿಯ ಪ್ರಧಾನ ಸಂಚಾಲಕರಾದ ಕೊಡವೂರು ದಿವಾಕರ ಶೆಟ್ಟಿ ಮತ್ತು ಮುಖ್ಯ ಸಂಚಾಲಕರಾದ ಗಿರೀಶ್ ಅಂಚನ್ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
