ಉಡುಪಿ ಉಚ್ಚಿಲ ದಸರಾ -2024 ವಿದ್ಯುದೀಪಾಲಂಕಾರದ ಉದ್ಘಾಟನೆ
Thumbnail
ಉಚ್ಚಿಲ : ಉಡುಪಿ ಉಚ್ಚಿಲ‌ ದಸರಾ 2024 ಪ್ರಯುಕ್ತ ಉದ್ಯಮಿ, ಎಂ.ಆರ್.ಜಿ ಗ್ರೂಪ್ ನ ಮುಖ್ಯಸ್ಥ ಡಾ. ಕೆ. ಪ್ರಕಾಶ್ ಅವರ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯನ್ನು ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ಗುರುವಾರ ಸಂಜೆ ಉದ್ಘಾಟಿಸಿದರು. ಈ ಸಂದರ್ಭ ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಅಧ್ಯಕ್ಷ ನಾಡೋಜ ಡಾ. ಜಿ. ಶಂಕರ್, ಡಾ. ಕೆ. ಪ್ರಕಾಶ್ ಶೆಟ್ಟಿ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ, ಮಹಾರಾಷ್ಟ್ರ ಸರಕಾರದ ವಿಧಾನ ಪರಿಷತ್‌ ಸದಸ್ಯ ಮಿಲಿಂದ್‌ ನಾರ್ವೇಕರ್‌ ದಂಪತಿ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ದಸರಾ ಸಮಿತಿ ಅಧ್ಯಕ್ಷ ವಿನಯ್ ಕರ್ಕೇರ, ಮಹಾಜನ ಸಂಘದ ಕಾರ್ಯದರ್ಶಿ ಶರಣ್ ಮಟ್ಟು, ಪ್ರಮುಖರಾದ ವಾಸುದೇವ ಸಾಲ್ಯಾನ್, ಗುಂಡು ಬಿ. ಅಮೀನ್, ಶ್ರೀಪತಿ ಭಟ್ ಉಚ್ಚಿಲ, ಮೋಹನ್ ಬೇಂಗ್ರೆ, ಮೊದಲಾದವರು ಉಪಸ್ಥಿತರಿದ್ದರು.
Additional image
03 Oct 2024, 08:57 PM
Category: Kaup
Tags: