ಕಟಪಾಡಿ ಪೇಟೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
Thumbnail
ಕಟಪಾಡಿ : ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ನೋಂದಣಿ ಅಭಿಯಾನವನ್ನು ಶನಿವಾರ ಕಟಪಾಡಿ ಪೇಟೆಯಲ್ಲಿ ‌ನಡೆಸಲಾಯಿತು. ಅಭಿಯಾನದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀನಿವಾಸ್ ಕಿಣಿ, ಸುಭಾಸ್ ಬಲ್ಲಾಳ್, ಪವಿತ್ರಾ ಶೆಟ್ಟಿ, ಈಶ್ವರ್ ಕಟಪಾಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷರಾದ ವೀಣಾ ಶೆಟ್ಟಿ, ಶಕ್ತಿ ಕೇಂದ್ರದ ಸಂತೋಷ್ ಏಣಗುಡ್ಡೆ, ನಿತಿನ್ ಮೂಡುಬೆಟ್ಟು, ಹರ್ಷಿತ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
05 Oct 2024, 06:31 PM
Category: Kaup
Tags: