ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ಅವಹೇಳನ - ಕಠಿಣ ಕ್ರಮ ಕೈಗೊಳ್ಳಲು ಮನವಿ
ಉಡುಪಿ : ಕೇಂದ್ರ ಸಂಪುಟ ಸಚಿವರಾದ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಅವಹೇಳನಕಾರಿ ಹಾಗೂ ಅತ್ಯಂತ ಕೀಳು ಮಟ್ಟದ ಪದ ಬಳಸಿರುವ ಲೋಕಾಯುಕ್ತ ಎಡಿಜಿಪಿ ಎಂ ಚಂದ್ರಶೇಖರ್ ರವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಉಡುಪಿ ಜಿಲ್ಲಾಧಿಕಾರಿಗಳ ಮುಖೇನ ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿ ಮತ್ತು ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ, ವಿಧಾನಸಭಾ ಕ್ಷೇತ್ರದ ಅಧ್ಯಕ್ಷರನ್ನು ಒಳಗೊಂಡ ತಂಡ ಅಪರ ಜಿಲ್ಲಾಧಿಕಾರಿ ಮಮತಾ ದೇವಿಯವರಿಗೆ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಧ್ಯಕ್ಷ ವಾಸುದೇವರಾವ್, ರಾಜ್ಯ ಕಾರ್ಯದರ್ಶಿ ಸುಧಾಕರ ಶೆಟ್ಟಿ ಹೆಜಮಾಡಿ, ಜಿಲ್ಲಾ ಕಾರ್ಯದರ್ಶಿಗಳಾದ ಜಯರಾಮ ಆಚಾರ್ಯ, ರಮೇಶ್ ಕುಂದಾಪುರ, ಕಾರ್ಕಳ ಬ್ಲಾಕ್ ಅಧ್ಯಕ್ಷರು ಶ್ರೀಕಾಂತ್ ಹೆಬ್ರಿ, ಕಾಪು ಬ್ಲಾಕ್ ಅಧ್ಯಕ್ಷ ದೇವರಾಜ್ ತೊಟ್ಟಂ, ವೆಂಕಟೇಶ್ ಎಂ ಟಿ, ಬಿ ಕೆ ಮೊಹಮ್ಮದ್, ಅಶ್ರಫ್ ಪಡುಬಿದ್ರಿ, ರಂಗ ಕೋಟ್ಯಾನ್, ಇಸ್ಮಾಯಿಲ್ ಹೆಜಮಾಡಿ ಮತ್ತಿತರರು ಉಪಸ್ಥಿತರಿದ್ದರು.
