ಉತ್ತಮ ಶಿಕ್ಷಕ ಪ್ರಶಸ್ತಿಗೆ ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ. ನೀಲಾನಂದ ನಾಯ್ಕ್ ಆಯ್ಕೆ
Thumbnail
ಕಾಪು : ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರಿ.) ಕರ್ನಾಟಕ (ರುಪ್ಸ) ಇವರು ಕೊಡ ಮಾಡುವ ಉತ್ತಮ ಶಿಕ್ಷಕ ಪ್ರಶಸ್ತಿಗೆ ಕಾಪು ತಾಲೂಕಿನ ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ. ನೀಲಾನಂದ ನಾಯ್ಕ್ ಇವರು ಆಯ್ಕೆಯಾಗಿದ್ದಾರೆ. ಅಕ್ಟೋಬರ್ 21, ಸೋಮವಾರ ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪರವರು ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
17 Oct 2024, 08:16 PM
Category: Kaup
Tags: