ಬೆಳಪು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶಾಲಾ ವಿದ್ಯಾರ್ಥಿಗಳ ಉಡುಪಿ ವಲಯ ಮಟ್ಟದ ಕ್ರೀಡಾಕೂಟದ ಟ್ರೋಫಿ ಹಾಗೂ ಪದಕಗಳ ಕೊಡುಗೆ
ಕಾಪು : ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಉಡುಪಿ, ಸರಕಾರಿ ಸಂಯುಕ್ತ ಉರ್ದು ಪ್ರೌಢಶಾಲೆ ಮಲ್ಲಾರು ಮತ್ತು ಸರಕಾರಿ ಸಂಯುಕ್ತ ಪ್ರೌಢಶಾಲೆ ಮೂಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅ.23 ಮತ್ತು 24 ರಂದು ಮಹಾತ್ಮ ಗಾಂಧಿ ಕ್ರೀಡಾಂಗಣ ಅಜ್ಜರಕಾಡು ಉಡುಪಿಯಲ್ಲಿ
ನಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಉಡುಪಿ ವಲಯ ಮಟ್ಟದ ಕ್ರೀಡಾಕೂಟದ ಟ್ರೋಫಿ ಹಾಗೂ ಪದಕಗಳನ್ನು
ಬೆಳಪು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿವಂಗತ ಮೊಹಮ್ಮದ್ ಝಹಿರ್ ಅಬ್ದುಲ್ ಸತ್ತಾರ್ ಅವರ ಸ್ಮರಣಾರ್ಥ ವಹಿಸಲಾಗಿದೆ.
ಇದರ ವೆಚ್ಚದ ಚೆಕ್ ನ್ನು ಉರ್ದು ಪ್ರೌಢಶಾಲಾ ಮಲ್ಲಾರು ಇದರ ಮುಖ್ಯ ಶಿಕ್ಷಕಿ ವೀಣಾ ಇವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭ ಬೆಳಪು ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಶಾನವಾಝ್ ಫಜಲುದ್ದೀನ್, ಉಪಾಧ್ಯಕ್ಷ ಶಾಹಿದ್ ನವಾಝ್, ಹಿರಿಯ ಸದಸ್ಯರಾದ ಶೇಕ್ ಖಾಲಿದ್ ಅಹ್ಮದ್, ಶಾನವಾಝ್ ನೂರುಲ್ಲಾ ಮತ್ತು ಸಯೀದ್ ಅಹ್ಮದ್ ಅಂಜಲಬೆಟ್ಟು ಉಪಸ್ಥಿತರಿದ್ದರು.
