ಶಂಕರಪುರದ ಅನಿಲ್ ಕುಮಾರ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ
ಉಡುಪಿ: ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಾಗಿರುವ ಶಂಕರಪುರ ಶಿವಾನಂದನಗರದ ಅನಿಲ್ ಕುಮಾರ್ ರವರು ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ (RUPSA)ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿ ಅಕ್ಟೋಬರ್ 21ರಂದು ಬೆಂಗಳೂರಿನ ಜುಬಿಲಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಸ್ವೀಕರಿಸಿದರು.
