ವಿಧಾನ ಪರಿಷತ್‌ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಪುತ್ತೂರಿನ ಕಿಶೋರ್ ಕುಮಾ‌ರ್ ಗೆಲುವು
Thumbnail
ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದಂತಹ ವಿಧಾನ ಪರಿಷತ್‌ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪುತ್ತೂರಿನ ಕಿಶೋರ್ ಕುಮಾ‌ರ್ ಬೊಟ್ಯಾಡಿ ಜಯಭೇರಿ ಸಾಧಿಸಿದ್ದಾರೆ. ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು. ಇಂದು (ಅ.24) ಮಂಗಳೂರಿನ ಸಂತ ಅಲೋಷಿಯಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಿತು. ಕಿಶೋರ್ ಕುಮಾ‌ರ್ ಅಧಿಕ ಮತ ಪಡೆಯುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ, ಎಸ್‌ಡಿಪಿಐ ಅಭ್ಯರ್ಥಿ ಅನ್ವ‌ರ್ ಸಾದತ್ ಬಜತ್ತೂರು ಹಾಗೂ ಪಕ್ಷೇತರ ಅಭ್ಯರ್ಥಿ ದಿನಕ‌ರ್ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದಾರೆ.
24 Oct 2024, 12:47 PM
Category: Kaup
Tags: