ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳ ಕುರಿತು ಅರಣ್ಯಾಧಿಕಾರಿಯ ಮಾತುಗಳು ಖಂಡನೀಯ : ಪ್ರವೀಣ್ ಪೂಜಾರಿ
Thumbnail
ಉಡುಪಿ : ಅರಣ್ಯಾಧಿಕಾರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಜೀವ ಪೂಜಾರಿ ಕಾಣಿಯೂರು ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ಅವಮಾನದ ಮಾತುಗಳನ್ನಾಡಿರುವುದು ಖಂಡನೀಯ ಎಂದು ಬಿಲ್ಲವ ಯುವ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಹೇಳಿಕೆ ನೀಡಿದ್ದಾರೆ. ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುವಾಗ ಸಾಮಾಜಿಕ ಸ್ವಾಸ್ಥ್ಯದ ಕುರಿತು ಕಾಳಜಿ ವಹಿಸಬೇಕಾಗಿದೆ. ಸುಖಾಸುಮ್ಮನೆ ಮನಸ್ಸಿಗೆ ಬಂದಂತೆ ಆಡಿಕೊಂಡರೆ ಅದು ಶೋಭೆಯಲ್ಲ. ಹೆಣ್ಣು ಮಕ್ಕಳು ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದನ್ನೆ ಗುರಿಯಾಗಿಸಿ ಮಾತನ್ನಾಡಿದ ಸಂಜೀವ ಪೂಜಾರಿಯವರು ಇನ್ನು ಮುಂದಾದರೂ ತನ್ನನ್ನು ತಾನು ತಿದ್ದಿಕೊಳ್ಳುವುದು ಕ್ಷೇಮವೆನಿಸುತ್ತದೆ. ಸರ್ಕಾರಿ ಅಧಿಕಾರಿ ಸಂಜೀವ ಪೂಜಾರಿಯವರ ಹೇಳಿಕೆಯನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಖಂಡಿಸುತ್ತದೆ.
27 Oct 2024, 07:09 AM
Category: Kaup
Tags: