ನ. 2 : ಕಾಪು ಬೀಚ್ನಲ್ಲಿ ಉಡುಪಿ ಮತ್ತು ದ.ಕ ಜಿಲ್ಲಾ ಮಟ್ಟದ ಗೂಡುದೀಪ ಸ್ಪರ್ಧೆ
Thumbnail
ಕಾಪು : ಗ್ರಾವಿಟಿ ಡಾನ್ಸ್ ಸ್ಟುಡಿಯೋ ಕಾಪು ಮತ್ತು ಕಿಂಗ್ ಟೈಗರ್ಸ್ ಕಾಪು ಇವರ ಜಂಟಿ ಆಶ್ರಯದಲ್ಲಿ ಉಡುಪಿ ಮತ್ತು ದ.ಕ ಜಿಲ್ಲಾ ಮಟ್ಟದ ಗೂಡುದೀಪ ಸ್ಪರ್ಧೆ ನವೆಂಬರ್ 02, ಶನಿವಾರ ಸಂಜೆ 4 ಗಂಟೆಗೆ ಕಾಪು ಬೀಚ್ ನಲ್ಲಿ ಜರಗಲಿದೆ. ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ ಮತ್ತು ಆಧುನಿಕ ಗೂಡುದೀಪ ಸ್ಪರ್ಧೆ ವಿಭಾಗದಲ್ಲಿ ಪ್ರತಿ ವಿಭಾಗದ ವಿಜೇತರಿಗೆ ನಗದು ಮತ್ತು ಶಾಶ್ವತ ಫಲಕ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಅ. 31 ನೊಂದಾವಣಿಗೆ ಕೊನೆಯ ದಿನವಾಗಿದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 8970970384, 9902611579
31 Oct 2024, 03:35 PM
Category: Kaup
Tags: