ಲಯನ್ಸ್ ಕ್ಲಬ್ ಬಿ.ಸಿ.ರೋಡ್ ಬಂಟಕಲ್ಲು ವತಿಯಿಂದ ದೀಪಾವಳಿ ಸಂಭ್ರಮಾಚರಣೆ
Thumbnail
ಬಂಟಕಲ್ಲು : ಹಬ್ಬಗಳು ಕೇವಲ ಆಡಂಬರದ ಹಬ್ಬವಾಗಿದೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಹಬ್ಬವಾಗಬೇಕು ಎಂದು 92ನೇ ಹೇರೂರು ವಿಕಾಸ ಸೇವಾ ಸಮಿತಿ ಅಧ್ಯಕ್ಷರಾದ ಮಾಧವ ಆಚಾರ್ಯರು ತಿಳಿಸಿದರು. ಅವರು ಲಯನ್ಸ್ ಕ್ಲಬ್ ಬಿ.ಸಿ.ರೋಡ್ ಬಂಟಕಲ್ಲು ವತಿಯಿಂದ ದೀಪಾವಳಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾರ್ಯಕ್ರಮವನ್ನು ಹೇರೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಗಿರಿಜಾ ತನಿಯ ಪೂಜಾರಿ ಅವರು ಉದ್ಘಾಟಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ, ಅತಿಥಿಯಾಗಿ ಆಗಮಿಸಿದ ಮಾಧವಾಚಾರ್ಯರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಅಧ್ಯಕ್ಷ ಉಮೇಶ್ ಕುಲಾಲ್, ಕಾರ್ಯದರ್ಶಿ ಟೋನಿ ಮೋನಿಸ್ , ಕೋಶಾಧಿಕಾರಿ ಸದಾನಂದ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅನಿತಾ ಪಂಜಿಮಾರು, ವಿಜಯ ಧೀರಜ್ ನಿರ್ವಹಿಸಿದರು. ಕಾರ್ಯದರ್ಶಿ ವಂದಿಸಿದರು.
Additional image
08 Nov 2024, 06:59 AM
Category: Kaup
Tags: