ಶಿರ್ವ ರೋಟರಿ : ದೀಪಾವಳಿ ಸಂಭ್ರಮ - 2024
ಶಿರ್ವ : ಹಬ್ಬಗಳ ರಾಜ "ದೀಪಾವಳಿ" ಭಾರತೀಯ ಸನಾತನ ಶ್ರೀಮಂತ ಸಂಸ್ಕೃತಿ, ಸೌಹಾರ್ದತೆಯ ಪ್ರತೀಕ ಎಂದು ಅನಿವಾಸಿ ಭಾರತೀಯ, ಬಂಟಕಲ್ಲು ಹೇರೂರಿನ ದತ್ತಾತ್ರೇಯ ಪಾಟ್ಕರ್ ನುಡಿದರು.
ಅವರು ಬುಧವಾರ ಬಂಟಕಲ್ಲು ರೋಟರಿ ಭವನದಲ್ಲಿ ಶಿರ್ವ ರೋಟರಿಯಿಂದ ಏರ್ಪಡಿಸಿದ "ದೀಪಾವಳಿ ಸಂಭ್ರಮ-2024" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಿರ್ವ ರೋಟರಿ ಅಧ್ಯಕ್ಷ ಆಲ್ವಿನ್ ಅಮಿತ್ ಅರಾನ್ಹಾ ವಹಿಸಿ ಹಬ್ಬದ ಶುಭಾಶಯ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ರೋಟರಿ ವಲಯ ಸೇನಾನಿ ಮೆಲ್ವಿನ್ ಡಿಸೋಜ ಶೂಭಾಶಂಸನೆಗೈದರು. ಸಹ ಸಂಯೋಜಕ ಡಾ.ವಿಟ್ಠಲ್ ನಾಯಕ್ ಪರಿಚಯಿಸಿದರು.
ಶ್ರೀನಿಧಿ, ಉಷಾ ಮರಾಠೆ ಪ್ರಾರ್ಥಿಸಿದರು. ಕಾರ್ಯಕ್ರಮ ಸಂಯೋಜಕರಾದ ಬಿ.ಪುಂಡಲೀಕ ಮರಾಠೆ ಸ್ವಾಗತಿಸಿ, ಪ್ರಾಸ್ತಾವಿಸಿದರು. ರೋಟರಿ ಕಾರ್ಯದರ್ಶಿ ಈವನ್ ಜೂಡ್ ಡಿಸೋಜ ವಂದಿಸಿದರು. ವಿಷ್ಣುಮೂರ್ತಿ ಸರಳಾಯ ನಿರೂಪಿಸಿದರು.
ಮೈಕಲ್ ಮತಾಯಸ್ ಸಹಕರಿಸಿದರು. ಸಾಮೂಹಿಕವಾಗಿ ದೀಪ ಪ್ರಜ್ವಲನ, ರಘುಪತಿ ಐತಾಳ್ ನೇತೃತ್ವದಲ್ಲಿ ಸುಡುಮದ್ದು ಪ್ರದರ್ಶನ ನಡೆಯಿತು.
