ಡಿ. 12 : ದಿ. ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ಸ್ಮರಣಾರ್ಥ ಕಾಪುವಿನಲ್ಲಿ ಬೃಹತ್ ರಕ್ತದಾನ ಶಿಬಿರ
Thumbnail
ಕಾಪು : ಸಮಾಜ ಸೇವಕ ಸೂರಿ ಶೆಟ್ಟಿ ಕಾಪು ಇವರ ನೇತೃತ್ವದಲ್ಲಿ ಡಿಸೆಂಬರ್ 12 ರಂದು ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ ಸಮಾಜರತ್ನ ದಿ. ಕೆ. ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ದಿ. ವಸುಂದರಾ ಶೆಟ್ಟಿ ಸ್ಮರಣಾರ್ಥ ಅವರ ಕುಟುಂಬಿಕರ ಹಾಗೂ ಅವರ ಸರ್ವ ಧರ್ಮಗಳ ಅಭಿಮಾನಿ ಬಂಧುಗಳ ಸಹಕಾರದಿಂದ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ ಮಜೂರು ಸರ್ಕಲ್ ಬಳಿಯ ಕೆ. ಲೀಲಾಧರ ಶೆಟ್ಟಿ ಭಾವಚಿತ್ರಕ್ಕೆ ಗೌರವ ಸಲ್ಲಿಸಿ ನಂತರ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭಾ ಕಾರ್ಯಕ್ರಮ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲ್ಲಿದ್ದು, ಕಾಪು ಪುರಸಭೆಯ ಕಾರ್ಮಿಕರು, ಚಾಲಕರು ಒಟ್ಟು 38 ಜನರಿಗೆ ಸನ್ಮಾನ, ಸಮಾಜ ಸೇವಕ ದೆಂದೂರು ಅಶೋಕ್ ಶೆಟ್ಟಿಯವರಿಗೆ ಸನ್ಮಾನ ಸಭಾ ವೇದಿಕೆಯಲ್ಲಿ ನಡೆಯಲಿದೆ ಎಂದು ಸಮಾಜ ಸೇವಕ ಸೂರಿ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
09 Nov 2024, 06:56 AM
Category: Kaup
Tags: