ಬೆಂಗಳೂರಿನಲ್ಲಿ ನ.17ರಂದು ಆಯೋಜಿಸಿರುವ ನವದುರ್ಗಾ ಲೇಖನ ಯಜ್ಞದಲ್ಲಿ ಪಾಲ್ಗೊಳ್ಳಲು ಮನವಿ
Thumbnail
ಕಾಪು : ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ಆಯೋಜಿಸಲಾದ ನವದುರ್ಗಾ ಲೇಖನ ಯಜ್ಞದಲ್ಲಿ ಬೆಂಗಳೂರಿನ ಜನತೆ ಪಾಲ್ಗೊಳ್ಳುವ ದೃಷ್ಟಿಯಿಂದ ನ.17 ರಂದು ಬೆಂಗಳೂರಿನ ಗಾಯತ್ರಿ ವಿಹಾರ, ಗೇಟ್ ನಂ 4, ಪ್ಯಾಲೇಸ್ ಗ್ರೌಂಡ್ ಇಲ್ಲಿ ಹಮ್ಮಿಕೊಂಡಿರುವ ವಾಗೀಶ್ವರಿ ಪೂಜೆಯ ಮೂಲಕ ನವದುರ್ಗಾ ಲೇಖನವನ್ನು ಬರೆಯುವ ಕಾರ್ಯಕ್ರಮದಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನವದುರ್ಗಾ ಲೇಖನ ಯಜ್ಞ ಬರೆದು ಕಾಪು ಅಮ್ಮನ ಕೃಪೆಗೆ ಪಾತ್ರರಾಗುವಂತೆ ಉಡುಪಿಯ ನಿಕಟ ಪೂರ್ವ ಶಾಸಕರಾದ ಕೆ ರಘುಪತಿ ಭಟ್ ಮನವಿ ಮಾಡಿದರು. ಅವರು ಕರ್ನಾಟಕ ಕರಾವಳಿ ಮಿತ್ರ ಮಂಡಳಿ ಹಾವನೂರು ಬಡಾವಣೆ, ನಾಗಸಂದ್ರ ಬೆಂಗಳೂರು ಇವರು ಬೆಂಗಳೂರಿನಲ್ಲಿ ರವಿವಾರ ಆಯೋಜಿಸಿದ ಕ್ರೀಡಾಕೂಟದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭ ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ- ಬೆಂಗಳೂರು ಸಮಿತಿ ಅಧ್ಯಕ್ಷರಾದ ಉಪೇಂದ್ರ ಶೆಟ್ಟಿ, ಕಾರ್ಯದರ್ಶಿಗಳಾದ ವಿಜಯ್ ಶೆಟ್ಟಿ, ನಾಗರಾಜ್ ರಾವ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
11 Nov 2024, 06:51 AM
Category: Kaup
Tags: