ಪಲಿಮಾರು ಕನ್ನಡ ಸಾಹಿತ್ಯ ಸಮ್ಮೇಳನ - ಶಿಕ್ಷಕರಿಗೆ ಒ.ಒ.ಡಿ ಸೌಲಭ್ಯ
Thumbnail
ಪಡುಬಿದ್ರಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನ ಪಲಿಮಾರು ಸರಕಾರಿ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ನ.16, ಶನಿವಾರ ಹಿರಿಯ ಸಾಮಾಜಿಕ ಕಾರ್ಯಕರ್ತ, ಸಂಘಟಕ,ಕೊರಗಭಾಷಾ ಸಂಶೋಧಕ ಸಾಹಿತಿ, ಪಾಂಗಾಳ ಬಾಬು ಕೊರಗ ಇವರ ಸರ್ವಾಧ್ಯಕ್ಷತೆಯಲ್ಲಿ ದಿನವಿಡೀ ವಿವಿಧ ಗೋಷ್ಠಿ/ಸಂವಾದ/ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈವಿಧ್ಯಮಯವಾಗಿ ಜರುಗಲಿದೆ. ಈ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಉಡುಪಿ ವಲಯದ ಎಲ್ಲ ಸರಕಾರಿ/ಅನುದಾನಿತ/ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗೆ ಅನ್ಯಕಾರ್ಯ ನಿಮಿತ್ತ ಸೌಲಭ್ಯವನ್ನು ಒದಗಿಸಿ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಡುಪಿ ಇವರು ಆದೇಶ ಹೊರಡಿಸಿದ್ದಾರೆ. ಅದೇ ರೀತಿ ಶಾಲಾ ಶಿಕ್ಷಣ ಇಲಾಖೆ(ಪ.ಪೂ) ಕಾಪು ತಾಲೂಕಿನ ಪದವಿ ಪೂರ್ವ ಕಾಲೇಜುಗಳ ಆಸಕ್ತ ಉಪನ್ಯಾಸಕರಿಗೆ ಉಪನಿರ್ದೇಶಕರು , ಶಾಲಾ ಶಿಕ್ಷಣ ಇಲಾಖೆ (ಪ.ಪೂ) ಇವರು ಅನ್ಯಕಾರ್ಯ ನಿಮಿತ್ತ ಸೌಲಭ್ಯ ನೀಡಿ ಆದೇಶಿಸಿದ್ದಾರೆ ಎಂದು ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
15 Nov 2024, 10:45 AM
Category: Kaup
Tags: