ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಾಧೀಶ ಭೇಟಿ
Thumbnail
ಉಚ್ಚಿಲ : ಇಲ್ಲಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶ ಜಸ್ಟೀಸ್ ಸವಣೂರು ವಿಶ್ವಜಿತ್ ಶೆಟ್ಟಿ ಸೋಮವಾರ ಭೇಟಿ ನೀಡಿದರು. ದೇವಳದ ವತಿಯಿಂದ ಪೂರ್ಣ ಕುಂಭದೊಂದಿಗೆ ಬರಮಾಡಿಕೊಂಡು ನಾಡೋಜ ಡಾ. ಜಿ. ಶಂಕರ್ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಶ್ರೀ ಗಿರಿಧರ್ ಸುವರ್ಣ, ಶ್ರೀ ಮನೋಹರ್ ಶೆಟ್ಟಿ, ಸಂತೋಷ್ ಶೆಟ್ಟಿ ತೆಂಕರಗುತ್ತು, ಯೋಗೀಶ್ ಶೆಟ್ಟಿ ಕಾಪು, ಶೋಭಿತ್ ಶೆಟ್ಟಿ, ಉಮೇಶ್ ಶೆಟ್ಟಿ, ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳ್, ಪ್ರಧಾನ ಅರ್ಚಕ ಶ್ರೀ ರಾಘವೇಂದ್ರ ಉಪಾಧ್ಯಾಯ, ರಾಘವೇಂದ್ರ ಸುವರ್ಣ ಬೈಕಾಡಿ ಮೊದಲಾದವರು ಉಪಸ್ಥಿತರಿದ್ದರು.
18 Nov 2024, 06:25 PM
Category: Kaup
Tags: