ಕಾಪು ಹೊಸ ಮಾರಿಗುಡಿ ದೇವಸ್ಥಾನ : ಮಲ್ಪೆ ಪರ್ಸಿನ್ ಮೀನುಗಾರರ ಸಂಘದ ವತಿಯಿಂದ ಶಿಲಾಸೇವೆಯ ದೇಣಿಗೆ ಸಮರ್ಪಣೆ
Thumbnail
ಕಾಪು : ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಲ್ಪೆ ಪರ್ಸಿನ್ ಮೀನುಗಾರರ ಸಂಘದ ವತಿಯಿಂದ ಶಿಲಾಸೇವೆಯ ದೇಣಿಗೆಯನ್ನು ಸಮರ್ಪಿಸಲಾಯಿತು. ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು. ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ.ವಾಸುದೇವ ಶೆಟ್ಟಿಯವರು ನವದುರ್ಗಾ ಲೇಖನ ಯಜ್ಞದ ಬಗ್ಗೆ ಮಾಹಿತಿ ನೀಡಿ, ಪ್ರತಿಯೊಬ್ಬ ಮೀನುಗಾರರ ಮನೆಯಲ್ಲೂ ನವದುರ್ಗಾ ಲೇಖನ ಬರೆಯುವ ಮೂಲಕ ಮನೆ ಮನದಲ್ಲೂ ಮಾರಿಯಮ್ಮ ನೆಲೆಯಾಗುವಂತೆ ಆಗಬೇಕು ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಕುಟುಂಬ ಸಮೇತರಾಗಿ ನವದುರ್ಗಾ ಲೇಖನ ಬರೆಯಬೇಕೆಂದು ವಿನಂತಿಸಿದರು. ಈ ಸಂದರ್ಭ ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಪರ್ಸಿನ್ ಮೀನುಗಾರರ ಸಂಘದ ಅಧ್ಯಕ್ಷರಾದ ನಾಗರಾಜ್ ಸುವರ್ಣ ಮತ್ತು ಪದಾಧಿಕಾರಿಗಳು ಹಾಗೂ ಪರ್ಸಿನ್ ಬೋಟ್ ಮಾಲಕರು ಮತ್ತು ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ನವದುರ್ಗಾ ಲೇಖನ ಯಜ್ಞ ಸಮಿತಿಯ ಕಾರ್ಯದರ್ಶಿ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಯೋಗೀಶ್ ವಿ.ಶೆಟ್ಟಿ ಬಾಲಾಜಿ , ನವದುರ್ಗಾ ಲೇಖನ ಯಜ್ಞ ಸಮಿತಿಯ ಉಪಾಧ್ಯಕ್ಷರಾದ ಹರಿಯಪ್ಪ ಕೋಟ್ಯಾನ್, ಮೋಹನ್ ಬಂಗೇರ, ಮಧುಕರ್ ಎಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Additional image Additional image
19 Nov 2024, 08:40 PM
Category: Kaup
Tags: