ನ.23 ಮತ್ತು 24 : ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಅಭಿಯಾನ - ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್.
Thumbnail
ಕಾಪು : ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಂಗವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ಹೆಸರು ತೆಗೆದು ಹಾಕುವ ಕುರಿತು ನವೆಂಬರ್ 23 ಮತ್ತು 24 ರಂದು ಬೆಳೆಗ್ಗೆ 10 ರಿಂದ ಸಂಜೆ 5.30 ರವರೆಗೆ ಕಾಪು ತಾಲ್ಲೂಕಿನಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಮೊದಲು ನವೆಂಬರ್ 9 ಮತ್ತು 10 ರಂದು ನಡೆದ ವಿಶೇಷ ಮತಪಟ್ಟಿ‌ ಪರಿಷ್ಕರಣೆಗೆ ಕಾಪು ತಾಲ್ಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ವಿಶೇಷ ಅಭಿಯಾನದ ದಿನಗಳಂದು ಎಲ್ಲಾ BLO ಗಳು ತಮ್ಮ ಮತಗಟ್ಟೆಗಳಲ್ಲಿ ಉಪಸ್ಥಿತರಿದ್ದು, ಆನ್ ಲೈನ್ ಸಾಫ್ಟ್‌ವೇರ್ ಮೂಲಕ ಈ ಪ್ರಕ್ರಿಯೆ ಮಾಡಲಿದ್ದಾರೆ. 18 ತುಂಬಿದ ಹೊಸ ಮತದಾರರು ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ತೆರಳಿ BLO ಗಳ ಬಳಿ‌ ನಿಗದಿತ ನಮೂನೆ ತುಂಬಿ ಕೊಟ್ಟು ಹೆಸರು ಸೇರ್ಪಡೆ ಮಾಡಲು ತಿಳಿಸಿದೆ. ನಮೂನೆಗಳು: ನಮೂನೆ 6 : ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ಅರ್ಜಿ ನಮೂನೆ 7 : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಆಕ್ಷೇಪಣೆಗಾಗಿ ಅರ್ಜಿ (ನಮೂನೆ 7 ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಅಥವಾ ಬೇರೊಬ್ಬ ವ್ಯಕ್ತಿಯ ಹೆಸರು ಅಥವಾ ಮರಣ ಹೊಂದಿದ್ದ ವ್ಯಕ್ತಿಯ ಹೆಸರನ್ನು ತೆಗೆದುಹಾಕುವಂತೆ ಕೋರಿ ಅರ್ಜಿ) ನಮೂನೆ 8 : ಮತದಾರರ ನಿವಾಸ ಬದಲಾವಣೆ/ ಪ್ರಸ್ತುತ ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿಗಾಗಿ/ ಬದಲಿ ಮತದಾರರ ಗುರುತಿನ ಚೀಟಿ ನೀಡುವಿಕೆಗಾಗಿ/ ಅಂಗವಿಕಲ ವ್ಯಕ್ತಿಯನ್ನು ಗುರುತಿಸುವುದಕ್ಕೆ ಅರ್ಜಿ ನವೆಂಬರ್ 23 ಮತ್ತು 24 ರ ಶನಿವಾರ ಮತ್ತು ಭಾನುವಾರದಂದು ನಡೆಯಲಿರುವ ಮತದಾರರ ಪಟ್ಟಿ ಪರಿಷ್ಕರಣೆಯ ಸದುಪಯೋಗಪಡಿಸಿಕೊಳ್ಳಲು ಕಾಪು ತಾಲೂಕು ತಹಶಿಲ್ದಾರ್ ಪ್ರತಿಭಾ ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
21 Nov 2024, 11:23 AM
Category: Kaup
Tags: