ಬಂಟಕಲ್ಲು ಶಾಲೆಗೆ ನಾಸಾ ಸಂಸ್ಥೆಯ ನಿವೃತ್ತ ಹಿರಿಯ ವಿಜ್ಞಾನಿ ಭೇಟಿ ; ಮಕ್ಕಳೊಂದಿಗೆ ಸಂವಾದ
ಶಿರ್ವ : ಅಮೇರಿಕದ ನಾಸಾ (ಬಾಹ್ಯಾಕಾಶ ಸಂಶೋಧನ ಕೇಂದ್ರ)ಸಂಸ್ಥೆಯ ಹಿರಿಯ ವಿಜ್ಞಾನಿ ಬಿಳಿಯಾರು ಡಾ. ನರಸಿಂಹ ಭಟ್ ರವರು ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರೀ ಹಿರಿಯ ಪ್ರಾರ್ಥಮಿಕ ಶಾಲೆ ಗೆ ಭೇಟಿ ನೀಡಿದರು.
ಇವರು ಈ ಶಾಲೆಯ ಹಳೇ ವಿದ್ಯಾರ್ಥಿಯಾಗಿದ್ದು, ಮಕ್ಕಳೊಂದಿಗೆ ಸಂವಾದ ನಡೆಸಿದ ಇವರು ಮುಂದಿನ ವರ್ಷ ನಡೆಯುವ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಇಚ್ಚೆ ವ್ಯಕ್ತಪಡಿಸಿ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿ, ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇವರೊಂದಿಗೆ ಅವರ ಸಹೋದರ ಈ ಶಾಲಾ ಹಳೇ ವಿದ್ಯಾರ್ಥಿ ಪದ್ಮನಾಭ ಭಟ್ ಜೊತೆಗಿದ್ದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ
ಶಶಿಧರ ವಾಗ್ಲೆಯವರು ಸ್ವಾಗತಿಸಿ ಶಾಲೆಯ ಅಭಿವೃದ್ದಿಯ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ಸದಸ್ಯ ಕೆ ಆರ್ ಪಾಟ್ಕರ್, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಉಮೇಶ್ ಪ್ರಭು, ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು.
