ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಬ್ರಹ್ಮಕಲಶೋತ್ಸವ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಲಯ, ಮಾಧ್ಯಮ ಕೇಂದ್ರ ಉದ್ಘಾಟನೆ
Thumbnail
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನೂತನ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಲಯ, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಲಯ ಮತ್ತು ಮಾಧ್ಯಮ ಕೇಂದ್ರ ಮಂಗಳವಾರ ಉದ್ಘಾಟನೆಗೊಂಡಿತು. ಕಟಪಾಡಿ - ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಬ್ರಹ್ಮಕಲಶೋತ್ಸವ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಲಯ ಉದ್ಘಾಟಿಸಿ ಶುಭ ಹಾರೈಸಿದರು. ಮಾಧ್ಯಮ ಕೇಂದ್ರವನ್ನು ಉದಯವಾಣಿಯ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನೋದ್ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು, ಮಾಧವ ಆರ್ ಪಾಲನ್, ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷರಾದ ರಘುಪತಿ ಭಟ್, ದೇವಳದ ತಂತ್ರಿ ವೇಮೂ. ಕುಮಾರಗುರು ತಂತ್ರಿ, ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರುಗಳಾದ ಜಯ ಸಿ ಕೋಟ್ಯಾನ್, ಯೋಗೀಶ್ ವಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಹಾಸ್ ಹೆಗ್ಡೆ, ರತ್ನಾಕರ ಶೆಟ್ಟಿ ನಡಿಕೆರೆ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಹರೀಶ್ ಹೆಜಮಾಡಿ, ಮಾಧ್ಯಮ ಸಂಚಾಲಕ ರಾಕೇಶ್ ಕುಂಜೂರು, ಜಯರಾಮ ಆಚಾರ್‌, ಶಿಲ್ಪಾ ಸುವರ್ಣ, ಗೀತಾಂಜಲಿ ಸುವರ್ಣ, ಕಾರ್ಯನಿರ್ವಹಣಾಧಿಕಾರಿ, ಮತ್ತಿತರರು ಉಪಸ್ಥಿತರಿದ್ದರು.
Additional image Additional image
03 Dec 2024, 12:48 PM
Category: Kaup
Tags: