ಕಾಪು ಶ್ರೀ ಹೊಸ ಮಾರಿಗುಡಿಗೆ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನದ ಸ್ವಾಮೀಜಿ ಭೇಟಿ
ಕಾಪು : ಬ್ರಹ್ಮಕಲಶೋತ್ಸವದ ಸಿದ್ಧತೆಯಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಂಗಳವಾರ ಕಟಪಾಡಿ - ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಭೇಟಿ ನೀಡಿ ದೇವಳದ ಕಾಮಗಾರಿ ವೀಕ್ಷಿಸಿದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ.ವಾಸುದೇವ ಶೆಟ್ಟಿ ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಮಾಲಾರ್ಪಣೆಯೊಂದಿಗೆ ಸ್ವಾಗತಿಸಿದರು.
ದೇವಳದ ತಂತ್ರಿ ವೇದಮೂರ್ತಿ ಕುಮಾರಗುರು ತಂತ್ರಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು.
ಈ ಸಂದರ್ಭ ದೇವಳದ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಕಾರ್ಯನಿರ್ವಹಣಾಧಿಕಾರಿ, ಭಕ್ತಾದಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
