ಕನ್ನಡ ಜಾನಪದ ಪರಿಷತ್ : ಕನ್ನಡ ಜಾನಪದ ರಾಜ್ಯೋತ್ಸವ ; ಅಭಿನಂದನಾ ಕಾರ್ಯಕ್ರಮ
ಉಡುಪಿ : ಕನ್ನಡ ಜಾನಪದ ಪರಿಷತ್ ಬೆಂಗಳೂರು - ಉಡುಪಿ ಜಿಲ್ಲಾ ಘಟಕ ಮತ್ತು ಉಡುಪಿ ತಾಲೂಕು ವತಿಯಿಂದ ಕನ್ನಡ ಜಾನಪದ ರಾಜ್ಯೋತ್ಸವ ಹಾಗೂ ಅಭಿನಂದನಾ ಕಾರ್ಯಕ್ರಮ ಬುಧವಾರ ಹನುಮಂತನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಅಧ್ಯಕ್ಷ ಡಾ.ಗಣೇಶ್ ಗಂಗೊಳ್ಳಿ, ಜಾನಪದವು ಎಲ್ಲಾ ಸಾಹಿತ್ಯಕ್ಕೆ ತಾಯಿಬೇರಾಗಿದೆ. ನಮ್ಮ ಜನಪದರು ನೀಡಿದ ಅಮೂಲ್ಯ ಕೊಡುಗೆಗಳನ್ನು ದಾಖಲಿಸಿ ಅವುಗಳನ್ನು ಮುಂದಿನ ಜನಾಂಗಕ್ಕೆ ತಿಳಿಸುವ ಕಾರ್ಯ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಜಾನಪದ ಪರಿಷತ್ ರಾಜ್ಯಾದ್ಯಂತ ಕೆಲಸ ಮಾಡುತ್ತಿದ್ದು ಉಡುಪಿ ಜಿಲ್ಲಾ ಘಟಕ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ಮಲ್ಲಿಕಾ ವಹಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಖ್ಯಾತ ಜಾನಪದ ಕಲಾವಿದರಾದ ವಾಸುದೇವ ಬನ್ನಂಜೆ ಹಾಗೂ ಕನ್ನಡ ಅಧ್ಯಾಪಕರಾದ ರೇಖಾ ಅವರನ್ನು ಗೌರವಿಸಲಾಯಿತು.
ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಭಾಗದಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಶಾಲೆಯ ವಿದ್ಯಾರ್ಥಿಗಳಾದ ದೀಕ್ಷಾ ಅಮೀನ್' ಮತ್ತು ಸೋನಿಯವರನ್ನು ಗೌರವಧನದೊಂದಿಗೆ ಅಭಿನಂದಿಸಲಾಯಿತು.
ತಾಲೂಕು ಅಧ್ಯಕ್ಷೆ ಮಾಯಾ ಕಾಮತ್ ಶುಭ ಹಾರೈಸಿದರು. ವೇದಿಕೆಯಲ್ಲಿ ತಾಲೂಕು ಕಾಯ೯ದಶಿ೯ ಕುಸುಮ ಕಾಮತ್, ಜಿಲ್ಲಾ ಪದಾಧಿಕಾರಿ ಮಹಮ್ಮದ್ ಫಾರುಕ್ ಉಪಸ್ಥಿತರಿದ್ದರು.
ಜಿಲ್ಲಾ ಸಂ.ಕಾಯ೯ದಶಿ೯ ರಾಘವೇಂದ್ರ ಪ್ರಭು, ಕವಾ೯ಲು ನಿರೂಪಿಸಿದರು. ಶಿಕ್ಷಕ ಜಯಪ್ರಕಾಶ್ ವಂದಿಸಿದರು.
