ಕಾಪು ಕಿಶೋರ ಯಕ್ಷಗಾನ ಸಂಭ್ರಮ - 2024 ಉದ್ಘಾಟನೆ
Thumbnail
ಕಾಪು : ಪ್ರದರ್ಶನ ಸಂಘಟನಾ ಸಮಿತಿ ಶಿರ್ವ ಸಹಯೋಗದೊಂದಿಗೆ ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇವರು ಆಯೋಜಿಸಿದ ಕಾಪು ಕ್ಷೇತ್ರದ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ "ಕಿಶೋರ ಯಕ್ಷಗಾನ ಸಂಭ್ರಮ - 2024" ಇದರ ಉದ್ಘಾಟನಾ ಸಮಾರಂಭ ರವಿವಾರ ಶಿರ್ವ ಮಹಿಳಾ ಸೌಧದ ಬಳಿ ನಡೆಯಿತು. ಶಿರ್ವ ಪ್ರದರ್ಶನ ಸಂಘಟನಾ ಸಮಿತಿ ಗೌರವಾಧ್ಯಕ್ಷರು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ, ಪ್ರದರ್ಶನ ಸಂಘಟನಾ ಸಮಿತಿ, ಶಿರ್ವ ವತಿಯಿಂದ ಆಯೋಜಿಸಲಾದ ಈ "ಕಿಶೋರ ಯಕ್ಷಗಾನ - 2024" ಶಿರ್ವಾ ಮಹಿಳಾ ಸೌಧದ ಬಳಿ ಡಿ. 15 ರಿಂದ ಡಿ. 17ರ ವರೆಗೆ ಸಂಜೆ 5 ರಿಂದ ರಾತ್ರಿ 8 ರ ವರೆಗೆ ದಿನಕ್ಕೆ ಎರಡು ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಎರಡು ಪ್ರಸಂಗಗಳಂತೆ ನಡೆಯಲಿದೆ. ಈ ಸಂದರ್ಭದಲ್ಲಿ ನಿವೃತ್ತ ಉಪನ್ಯಾಸಕಿ ಶಾರದಾ ಎಂ, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್, ಶಿರ್ವ ಪ್ರದರ್ಶನಾ ಸಂಘಟನಾ ಸಮಿತಿ ಸಂಚಾಲಕರಾದ ಶ್ರೀಪತಿ ಕಾಮತ್, ಶಿರ್ವ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ವಿಠಲ್ ಬಿ ಅಂಚನ್, ಯಕ್ಷಗಾನ ಕಲಾರಂಗ ರಿ. ಉಪಾಧ್ಯಕ್ಷರಾದ ವಿ.ಜಿ ಶೆಟ್ಟಿ, ಎಸ್.ವಿ ಭಟ್, ಯಕ್ಷ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್ ಮತ್ತಿತರರು ಉಪಸ್ಥಿತರಿದ್ದರು.
15 Dec 2024, 06:29 PM
Category: Kaup
Tags: