ಜ.5 : ಉಡುಪಿ ಜಿಲ್ಲಾ ನಾಯಕ ಸಮುದಾಯ ಸಂಘದ ಮಹಾಸಭೆ
ಉಡುಪಿ : ನಾಯಕ ಸಮುದಾಯ ಸಂಘ (ರಿ.) ಉಡುಪಿ ಜಿಲ್ಲೆ ಇದರ ಮಹಾಸಭೆ ಜನವರಿ 5, ಆದಿತ್ಯವಾರ ಪೂರ್ವಾಹ್ನ ಘಂಟೆ 10 ಕ್ಕೆ ವೀರಭದ್ರ ದೇವಸ್ಥಾನ, ಕಲ್ಯಾಣಪುರ ಇಲ್ಲಿ ಜರಗಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ನಾಯಕ ಸಮುದಾಯ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ನಾಯಕ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಹಿರಿಯ ವೈದ್ಯಕೀಯ ತಜ್ಞರಾದ ಡಾ| ದಯಾಮಣಿ ಬಿ., ಕಾರ್ಕಳ ನಗರ ಠಾಣೆಯ ಸಹಾಯಕ ಉಪನಿರೀಕ್ಷಕರಾದ ಯಶವಂತ್ ಭಾಗವಹಿಸಲಿದ್ದಾರೆ.
ಉಡುಪಿ ಜಿಲ್ಲಾ ನಾಯಕ ಸಮುದಾಯ ಸಂಘದ ಗೌರವಾಧ್ಯಕ್ಷ ಶೇಖರ ನಾಯಕ, ಗೌರವ ಸಲಹೆಗಾರರಾದ ವಸಂತ ನಾಯಕ, ಸುನೇತ್ರ ನಾಯಕ, ಕಾಪು ತಾಲೂಕು ನಾಯಕ ಸಮುದಾಯ ಸಂಘದ ಅಧ್ಯಕ್ಷರಾದ ನೀಲಾನಂದ ನಾಯಕ, ಮಂಗಳೂರು ತಾಲೂಕು ಅಧ್ಯಕ್ಷರಾದ ಹರೀಶ ನಾಯಕ ಉಪಸ್ಥಿತರಿರಲಿದ್ದಾರೆ.
ಇದೇ ಸಂದರ್ಭದಲ್ಲಿ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಶೇ.85 ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಸಂಘದ ಸಂಚಾಲಕರಾದ ನೀಲಾನಂದ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
