ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
ಕಾಪು : ಕಾಪು ನಗರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಮಾಜಿ ನಾಗರಾಭಿವೃದ್ಧಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರ ಶಿಫರಾಸ್ಸಿನ ಮೇರೆಗೆ
ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷರು, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿರುವ ವಿಕ್ರಂ ಕಾಪುರವರನ್ನು ಅಧ್ಯಕ್ಷರನ್ನಾಗಿ, ಮೊಹಮ್ಮದ್ ಸಾದಿಕ್, ಲಕ್ಷ್ಮೀಶ ತಂತ್ರಿ ಮತ್ತು ಹರೀಶ್ ನಾಯಕ್ ರವರನ್ನು ಸದಸ್ಯರನ್ನಾಗಿ ನೇಮಕಗೊಳಿಸಲಾಗಿದೆ.
ನೇಮಕದ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಯವರ ಪ್ರಕಟಣೆಯು ತಿಳಿಸಿದೆ.
ನೂತನ ಕಾಪು ನಗರ ಯೋಜನಾ ಪ್ರಾಧಿಕಾರದ ಸಮಿತಿಯ ಅಧಿಕಾರ ಸ್ವೀಕಾರ ಸಮಾರಂಭವು ಜ. 6, ಸೋಮವಾರದಂದು ಪೂರ್ವಹ್ನ ಗಂಟೆ 10ಕ್ಕೆ ಕಾಪು ಪುರಸಭೆ ಕಟ್ಟಡದಲ್ಲಿರುವ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಜರುಗಲಿದೆ.
