ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಮುಂಬಯಿ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಭೇಟಿ
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮುಂಬಯಿಯ ಉದ್ಯಮಿ, ಹೇರಂಭ ಇಂಡಸ್ಟ್ರೀಸ್‌ನ ಕಾರ್ಯ ನಿರ್ವಾಹಕ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಅವರು ಬುಧವಾರ ಭೇಟಿ ನೀಡಿ, ಸಕುಟುಂಬಿಕರಾಗಿ ಬರೆದಿರುವ ನವದುರ್ಗಾ ಲೇಖನ ಯಜ್ಞದ ಪುಸ್ತಕವನ್ನು ಶಿಲಾಸೇವೆ ಸಹಿತವಾಗಿ ಸಮರ್ಪಿಸಿದರು.
ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಅವರು ಕನ್ನಡ ಭಾಷೆಯಲ್ಲಿ ನವದುರ್ಗಾ ಲೇಖನವನ್ನು ಬರೆದಿದ್ದು, ಅವರ ಪತ್ನಿ ಸುಜಾತ ಶೆಟ್ಟಿ ಅವರು ತುಳು ಭಾಷೆಯಲ್ಲಿ ಹಾಗೂ ಸೊಸೆ ಮತ್ತು ಮನೆಯವರು ಇಂಗ್ಲೀಷ್ ಮತ್ತು ಹಿಂದಿ ಭಾಷೆಯಲ್ಲಿ ಕಾಪು ಮಾರಿಯಮ್ಮನ ಸ್ಮರಣೆಯೊಂದಿಗೆ ನವದುರ್ಗಾ ಲೇಖನವನ್ನು ಬರೆದಿದ್ದಾರೆ.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಪುಸ್ತಕವನ್ನು ಸ್ವೀಕರಿಸಿ, ಮಾರಿಯಮ್ಮ ದೇವಿಯ ಪ್ರಸಾದ ನೀಡಿ ಗೌರವಿಸಿದರು.
ಮುಂಬಯಿಯ ಉದ್ಯಮಿ ಕೆ. ಕೆ. ಶೆಟ್ಟಿ , ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ್ ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ನವದುರ್ಗಾ ಲೇಖನ ಯಜ್ಞದ ಮಹಿಳಾ ಸಮಿತಿ ಪ್ರಧಾನ ಸಂಚಾಲಕರಾದ ಗೀತಾಂಜಲಿ ಎಂ. ಸುವರ್ಣ, ಸಾವಿತ್ರಿ ಗಣೇಶ್, ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ್ ಎಲ್. ಸಾಲ್ಯಾನ್, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಚೇರಿ ನಿರ್ವಾಹಕರಾದ ಜಯರಾಮ್ ಆಚಾರ್ಯ, ಕಾರ್ತಿಕ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
