ಉಚ್ಚಿಲ: ಪಾದಚಾರಿಗೆ ಕಾರು ಡಿಕ್ಕಿ ಸ್ಥಳದಲ್ಲೇ ಸಾವು
ಪಡುಬಿದ್ರಿ : ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರೊಂದು ರಸ್ತೆ ದಾಟುತ್ತಿದ್ದ ವಯೋವೃದ್ಧರಿಗೆ ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72)ಎಂದು ಗುರುತಿಸಲಾಗಿದೆ.
ಅವರು ಪಶ್ಚಿಮ ಬದಿಯಿಂದ ಪೂರ್ವ ಬದಿಗೆ ರಸ್ತೆ ದಾಟುತ್ತಿದ್ದ ಸಂದರ್ಭ ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಅವರು ಘಟನಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಪಡುಬಿದ್ರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
