ಉದ್ಯಾವರ : ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ - ಪಣಿಯೂರಿನ ಯುವಕ ಮೃತ್ಯು
ಉದ್ಯಾವರ : ಇಲ್ಲಿನ ಕೊರಂಗ್ರಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಡ್ಸ್ ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ
ಶುಕ್ರವಾರ ತಡರಾತ್ರಿ ಘಟಿಸಿದೆ.
ಕೊರಂಗ್ರಪಾಡಿಯಿಂದ ಉದ್ಯಾವರ ಮೂಲಕವಾಗಿ ಪಣಿಯೂರಿಗೆ ಮರಳುತ್ತಿದ್ದ ಬೈಕ್ ಸವಾರ ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ (19) ಮೃತ ಯುವಕ. ಬೆಂಕಿಯ ತೀವ್ರತೆಗೆ ಲಾರಿ ಮತ್ತು ಸ್ಕೂಟರ್ ಸುಟ್ಟು ಕರಕಲಾಗಿದೆ.
ಅಪಘಾತದ ಸಂದರ್ಭ ಲಾರಿಯ ಅಡಿಭಾಗದಲ್ಲಿ ಬೈಕ್ ಸಿಲುಕಿಕೊಂಡಿದ್ದು ಈ ವೇಳೆ ಬೈಕಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಹಾಗೂ ಲಾರಿ ಬೆಂಕಿಗಾಹುತಿಯಾಗಿದೆ.
ಈ ಬಗ್ಗೆ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
