ಕಾಪು  ಶ್ರೀ ಹೊಸ ಮಾರಿಗುಡಿ : ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ  ನವಚಂಡೀಯಾಗ ಸಂಪನ್ನ
Thumbnail
ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾನಿಧ್ಯ ವೃದ್ಧಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಮಂಗಳವಾರ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವ ಚಂಡೀಯಾಗ ನೆರವೇರಿತು. ದೇವಸ್ಥಾನದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ ಆರ್ಚಕರಾದ ವೇದಮೂರ್ತಿ ಕಲ್ಯ ಶ್ರೀನಿವಾಸ ತಂತ್ರಿಯವರ ಉಪಸ್ಥಿತಿಯಲ್ಲಿ ನವ ಚಂಡೀಯಾಗದ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಸಂಪನ್ನಗೊಂಡಿತು. ಬೆಳಿಗ್ಗೆ ನವಚಂಡೀಯಾಗ ಆರಂಭ, ಕಲ್ಪೋಕ್ತ ಪೂಜೆ, ಪೂರ್ಣಾಹುತಿ, ಧಾರ್ಮಿಕ ಸಭಾ ಕಾರ್ಯಕ್ರಮ, ವಾಗೀಶ್ವರಿ ಪೂಜೆ, ಮಹಾಮಂಗಳಾರತಿ, ಮಹಾಪ್ರಸಾದ ವಿತರಣೆ ಹಾಗೂ ಅನ್ನಪ್ರಸಾದ ವಿತರಣೆ ನಡೆಯಿತು. ನವದುರ್ಗಾ ಲೇಖನ ಯಜ್ಞದ ಮತ್ತು ನವ ಚಂಡೀಯಾಗದ  ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮತ್ತು ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಆಶೀರ್ವಚನ ನೀಡಿದರು.   ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸರಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್, ವಿಧಾನಪರಿಷತ್‌ ಸದಸ್ಯ   ಡಾ. ಮಂಜುನಾಥ್ ಭಂಡಾರಿ, ಕಾಪು ತಹಶೀಲ್ದಾರ್‌ ಡಾ. ಮನಮೋಹನ್‌ ಶೆಟ್ಟಿ, ಶಶಿಧರ ಶೆಟ್ಟಿ, ಪ್ರತಿಭಾ ಆರ್‌, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷರಾದ ಕೆ. ರಘುಪತಿ ಭಟ್‌, ಉಪಾಧ್ಯಕ್ಷ  ಹರಿಯಪ್ಪ ಕೋಟ್ಯಾನ್, ಕಾರ್ಯಾಧ್ಯಕ್ಷ ಕೃಷ್ಣ ಪ್ರಸಾದ್ ಅಡ್ಯಂತಾಯ, ಉದಯ್ ಕುಮಾ‌ರ್ ಶೆಟ್ಟಿ ಮುನಿಯಾಲು, ಪ್ರಭಾಕರ ಶೆಟ್ಟಿ ಮಂಡಗದ್ದೆ, ಕೃಷ್ಣ ಶೆಟ್ಟಿ ಮುಂಬಯಿ, ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲಬಟ್ಟು, ಡಾ. ದೇವಿಪ್ರಸಾದ್‌ ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಕಾರ್ಯದರ್ಶಿ ಯೋಗೀಶ್‌ ವಿ. ಶೆಟ್ಟಿ, ಕೋಶಾಧಿಕಾರಿ ಕೆ ವಿಶ್ವನಾಥ್‌, ಉಪಾಧ್ಯಕ್ಷ ಹರಿಯಪ್ಪ ಕೋಟ್ಯಾನ್‌, ಸಂಚಾಲಕ ಸುವರ್ಧನ್‌ ನಾಯಕ್‌, ಮಹಿಳಾ ಪ್ರಧಾನ ಸಂಚಾಲಕಿ ಗೀತಾಂಜಲಿ ಎಂ ಸುವರ್ಣ, ಸಂಚಾಲಕಿ ಸಾವಿತ್ರಿ ಗಣೇಶ್‌, ಸಂಘಟನಾ ಕಾರ್ಯದರ್ಶಿ ಸಂದೀಪ್‌ ಕುಮಾರ್‌ ಮಂಜ, ಕಾಪು ದಿವಾಕರ ಶೆಟ್ಟಿ,  ಉಪಸ್ಥಿತರಿದ್ದರು. ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷ, ಮಾಜಿ ಶಾಸಕ ರಘುಪತಿ ಭಟ್‌ ಸ್ವಾಗತಿಸಿದರು. ಕೆ. ವಾಸುದೇವ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಯೋಗೀಶ್‌ ಶೆಟ್ಟಿ ವಂದಿಸಿದರು
04 Feb 2025, 07:00 PM
Category: Kaup
Tags: